ಬಂಟರ ಕ್ರೀಡೋತ್ಸವ: ಗುರುಪುರ ಬಂಟರ ಮಾತೃ ಸಂಘ(ರಿ) ಕ್ಕೆ ಸಮಗ್ರ ಪ್ರಶಸ್ತಿ
Update: 2023-09-14 13:23 IST
ಮಂಗಳೂರು: ಬಂಟರ ಯಾನೆ ನಾಡವರ ಮಾತೃ ಸಂಘ, ಸಿದ್ದಿವಿನಾಯಕ ಪ್ರತಿಷ್ಠಾನದ ಆಶ್ರಯದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಪ್ರಯುಕ್ತ ಬಂಟ್ಸ್ ಹಾಸ್ಟೇಲ್ ನ ಓಂಕಾರ ನಗರದಲ್ಲಿ ನಡೆದ ಬಂಟರ ಕ್ರೀಡಾ ಕೂಟದಲ್ಲಿ ಗುರುಪುರ ಬಂಟರ ಮಾತೃ ಸಂಘ (ರಿ) ಸಮಗ್ರ ಪ್ರಶಸ್ತಿಯನ್ನು ಗೆದ್ದುಕೊಂಡಿದೆ.
ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿದ ಗುರುಪುರ ಬಂಟರ ಮಾತೃ ಸಂಘ ಕೂಟದಲ್ಲಿ ಅತ್ಯಧಿಕ ಅಂಕ ಗಳಿಸಿ ಪ್ರಶಸ್ತಿಯನ್ನು ಪಡೆದಿದೆ. ಆನ್ಸ್ ಕಿರಣ್ ಪಕ್ಕಳ ಪೆರ್ಮಂಕಿಗುತ್ತು, ಪ್ರಯಾಗ್ ಲಕ್ಷ್ಮೀಪ್ರಸಾದ್ ಪಕ್ಕಳ, ಶರಣ್ ಸುದರ್ಶನ್ ಶೆಟ್ಟಿ ಪೆರ್ಮಂಕಿ ಪ್ರಶಸ್ತಿ ಪಡೆದರು. ಹಾಗೂ ಪೆನಾಲ್ಟಿ ಶೂಟೌಟ್ ನಲ್ಲಿ ಪ್ರಥಮ, ವಾಲಿಬಾಲ್ ಪಂದ್ಯಾಟದಲ್ಲಿ ದ್ವಿತೀಯ ಸ್ಥಾನವನ್ನು ಗುರುಪುರ ಬಂಟರ ಮಾತೃ ಸಂಘ (ರಿ) ಗಳಿಸಿತು.
ಗುರುಪುರ ಬಂಟರ ಮಾತೃ ಸಂಘದ ಅಧ್ಯಕ್ಷ ಸಂತೋಷ್ ಶೆಟ್ಟಿ ಶೆಡ್ಡೆ, ಕ್ರೀಡಾ ಮತ್ತು ಸಾಂಸ್ಕೃತಿಕ ಸಮಿತಿಯ ಸಂಚಾಲಕ ಸುದರ್ಶನ್ ಶೆಟ್ಟಿ ಪೆರ್ಮಂಕಿ ಹಾಗೂ ಪದಾಧಿಕಾರಿಗಳು ಪ್ರಶಸ್ತಿ ಸ್ವೀಕರಿಸಿದರು.