×
Ad

ಸುಟ್ಟ ಗಾಯ: ಚಿಕಿತ್ಸೆ ಫಲಕಾರಿಯಾಗದೆ ಎಎಸ್ಸೈ ಮೃತ್ಯು

Update: 2026-01-11 20:40 IST

ಮಂಗಳೂರು: ಬೆಂಕಿಯ ಸುಟ್ಟ ಗಾಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಪಾಂಡೇಶ್ವರ ಠಾಣೆಯ ಎಎಸ್ಸೈ ಹರಿಶ್ಚಂದ್ರ ಬೇರಿಕೆ (57) ಚಿಕಿತ್ಸೆ ಫಲಕಾರಿಯಾಗದೆ ರವಿವಾರ ಮೃತಪಟ್ಟಿದ್ದಾರೆ. ಇವರು ಪತ್ನಿ, ಓರ್ವ ಪುತ್ರ ಮತ್ತು ಪುತ್ರಿಯನ್ನು ಅಗಲಿದ್ದಾರೆ.

ನಗರದ ಕೆಪಿಟಿ ಬಳಿಯ ವ್ಯಾಸನಗರದ ಮನೆಯಲ್ಲಿ ಡಿ.28ರಂದು ತರಗೆಲೆಯನ್ನು ಸುಡುವ ವೇಳೆ ಬೆಂಕಿಯ ತೀವ್ರ ತರದ ಸುಟ್ಟ ಗಾಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗಲಿಲ್ಲ.

ಕಾಸರಗೋಡು ಜಿಲ್ಲೆಯ ಕಾವುಗೋಳಿಯ ನಿವಾಸಿಯಾಗಿದ್ದ ಹರಿಶ್ಚಂದ್ರ ಬೈಕಂಪಾಡಿಯಲ್ಲಿ ನೆಲೆಸಿದ್ದರು. ಕೆಲವು ವರ್ಷಗಳ ಹಿಂದೆ ವ್ಯಾಸ ನಗರದಲ್ಲಿ ಮನೆ ಮಾಡಿದ್ದರು. 1993ರಲ್ಲಿ ಪೊಲೀಸ್ ಇಲಾಖೆಗೆ ಸೇರ್ಪಡೆಗೊಂಡಿದ್ದ ಅವರು 33 ವರ್ಷಗಳಿಂದ ಪಾಂಡೇಶ್ವರ ಠಾಣೆ, ಡಿವೈಎಸ್‌ಪಿ ಕಚೇರಿ, ಎಸಿಪಿ ಕಚೇರಿ, ಕರಾವಳಿ ಕಾವಲು ಪಡೆ, ಸಂಚಾರ ಪೂರ್ವ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದರು. 10 ವರ್ಷದ ಹಿಂದೆ ಎಎಸ್ಸೈ ಆಗಿ ಭಡ್ತಿ ಪಡೆದಿದ್ದರು. ಪಾಂಡೇಶ್ವರದ ಪೊಲೀಸ್ ಲೇನ್ ನ ಮುನೀಶ್ವರ ಮಹಾಗಣಪತಿ ದೇವಸ್ಥಾನದ ಉಪಾಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News