ಪದವಿನಂಗಡಿ: ಬಸ್ ಢಿಕ್ಕಿ; ಪಾದಚಾರಿ ಮೃತ್ಯು
Update: 2023-11-02 22:38 IST
ಮಂಗಳೂರು : ನಗರದ ಬೊಂದೇಲ್-ಪದವಿನಂಗಡಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ಮೃತಪಟ್ಟಿರುವುದಾಗಿ ಪ್ರಕರಣ ದಾಖಲಿಸಿಕೊಂಡಿರುವ ಸಂಚಾರ ದಕ್ಷಿಣ ಠಾಣೆಯ ಪೊಲೀಸರು ತಿಳಿಸಿದ್ದಾರೆ.
ಸುಮಾರು 45 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿಯು ನ.1ರಂದು ರಾತ್ರಿ ೮ಕ್ಕೆ ಪದವಿನಂಗಡಿ ಯೂತ್ ಕ್ಲಬ್ ಸಮೀಪ ನಡೆದುಕೊಂಡು ಹೋಗುತ್ತಿದ್ದಾಗ ಬೊಂದೇಲ್ ಚರ್ಚ್ ಕಡೆಯಿಂದ ಪದವಿನಂಗಡಿ ಜಂಕ್ಷನ್‌ಗೆ ಬರುತ್ತಿದ್ದ ಖಾಸಗಿ ಬಸ್ ಡಿಕ್ಕಿಯಾಗಿದೆ.
ಇದರಿಂದ ಅಪರಿಚಿತ ವ್ಯಕ್ತಿಯು ಗಂಭೀರ ಗಾಯಗೊಂಡಿದ್ದು, ತಕ್ಷನ ಅವರನ್ನು ವೆನ್ಲಾಕ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.