×
Ad

ಸೆ.29ರಂದು ದ.ಕ.ಜಿಲ್ಲೆಯಲ್ಲಿ ಎಂದಿನಂತೆ ಬಸ್ ಸಂಚಾರ: ಅಝೀಝ್ ಪರ್ತಿಪ್ಪಾಡಿ

Update: 2023-09-28 20:58 IST

ಮಂಗಳೂರು, ಸೆ.28: ಕಾವೇರಿ ನೀರಿನ ವಿಚಾರದಲ್ಲಿ ಕನ್ನಡ ಸಂಘಟನೆಗಳು ಸೆ.29ರಂದು ರಾಜ್ಯ ಬಂದ್‌ಗೆ ಕರೆ ನೀಡಿ ದ್ದರೂ ಕೂಡ ದ.ಕ.ಜಿಲ್ಲೆಯಲ್ಲಿ ಎಂದಿನಂತೆ ಬಸ್ ಸಂಚಾರ ಕಾರ್ಯಾಚರಿಸಲಿದೆ ಎಂದು ದ.ಕ.ಜಿಲ್ಲಾ ಬಸ್ ಮಾಲಕರ ಸಂಘದ ಅಧ್ಯಕ್ಷ ಅಝೀಝ್ ಪರ್ತಿಪ್ಪಾಡಿ ತಿಳಿಸಿದ್ದಾರೆ.

ಕಾವೇರಿ ವಿಚಾರದಲ್ಲಿ ನಡೆಯುವ ಹೋರಾಟದ ಬಗ್ಗೆ ನಮಗೆ ಸಹಾನುಭೂತಿಯಿದೆ. ಈ ಸಮಸ್ಯೆಗೆ ಪರಿಹಾರ ಕಂಡು ಕೊಳ್ಳಬೇಕಿದೆ. ಆದರೆ, ಪರೀಕ್ಷೆಯ ಸಂದರ್ಭ ಬಂದ್ ಮಾಡಿದರೆ ಅದರ ಪರಿಣಾಮ ವಿದ್ಯಾರ್ಥಿಗಳ ಮೇಲಾಗಲಿದೆ. ಅಲ್ಲದೆ ಖಾಸಗಿ ಬಸ್‌ಗಳ ಸಂಚಾರ ಸ್ಥಗಿತಗೊಳಿಸಿದರೆ ಅದರಿಂದ ಜನಸಾಮಾನ್ಯರು ಸಂಕಷ್ಟಕ್ಕೀಡಾಗಲಿದ್ದಾರೆ. ಹಾಗಾಗಿ ಸೆ.29ರಂದು ದ.ಕ.ಜಿಲ್ಲೆಯಲ್ಲಿ ಖಾಸಗಿ ಬಸ್‌ಗಳು ಎಂದಿನಂತೆ ಸಂಚರಿಸಲಿದೆ ಎಂದು ಅಝೀಝ್ ಪರ್ತಿಪ್ಪಾಡಿ ಪ್ರತಿಕ್ರಿಯಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News