×
Ad

ಬ್ಯಾರಿ ಅಧ್ಯಯನ ಪೀಠದ ಸಲಹಾ ಸಮಿತಿ ಪುನರ್‌ರ‌ಚನೆ

Update: 2023-09-08 17:33 IST

ಮಂಗಳೂರು : ಮಂಗಳೂರು ವಿಶ್ವವಿದ್ಯಾನಿಲಯದ ಅಧೀನದಲ್ಲಿರುವ ಬ್ಯಾರಿ ಅಧ್ಯಯನ ಪೀಠದ ಸಲಹಾ ಸಮಿತಿಯನ್ನು ಪುನರ‌್ರಚಿಸಲಾಗಿದೆ.

ನೂತನ ಸದಸ್ಯರಾಗಿ ಮಂಗಳೂರು ವಿವಿ ಸಿಂಡಿಕೇಟ್ ಸದಸ್ಯೆ ಹಾಗೂ ಕಡಬದ ಏಮ್ಸ್ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಸಮೀರಾ ಕೆ.ಎ., ಮಂಗಳೂರು ವಿವಿ ಶೈಕ್ಷಣಿಕ ಮಂಡಳಿ ಸದಸ್ಯ ಹಾಗೂ ಕರಾವಳಿ ಕಾಲೇಜಿನ ಪ್ರಾಂಶುಪಾಲ ಮೋಹನ ನಾಯ್ಕ್, ಸಾಹಿತ್ಯ ಕ್ಷೇತ್ರದಿಂದ ಪತ್ರಕರ್ತ ಹಂಝ ಮಲಾರ್, ಗಾಯಕ ಖಾಲಿದ್ ತಣ್ಣೀರುಬಾವಿ, ಬ್ಯಾರಿವಾರ್ತೆಯ ಸಂಪಾದಕ ಬಶೀರ್ ಬೈಕಂಪಾಡಿ, ಬ್ಯಾರಿ ಸಾಹಿತ್ಯ ಅಕಾಡಮಿಯ ಮಾಜಿ ಅಧ್ಯಕ್ಷ ಬಿ.ಎ.ಮುಹಮ್ಮದ್ ಹನೀಫ್, ಶೈಕ್ಷಣಿಕ ಕ್ಷೇತ್ರದಿಂದ ನಿವೃತ್ತ ಪ್ರಾಂಶುಪಾಲ ಡಾ. ಇಸ್ಮಾಯೀಲ್ ಎನ್., ಮೊಯಿದಿನ್ ಬಾದ್ ಷಾ ನೇಮಕಗೊಂಡಿದ್ದಾರೆ.

ಮಂಗಳೂರು ವಿವಿ ಕುಲಪತಿ ಅಧ್ಯಕ್ಷರಾಗಿರುವ ಸಲಹಾ ಸಮಿತಿಗೆ ಬ್ಯಾರಿ ಸಾಹಿತ್ಯ ಅಕಾಡಮಿಯ ಅಧ್ಯಕ್ಷರು ಮತ್ತು ಮಂಗಳೂರು ವಿವಿ ಹಣಕಾಸು ಅಧಿಕಾರಿ ಖಾಯಂ ಆಹ್ವಾನಿತರಾಗಿರುತ್ತಾರೆ. ಬ್ಯಾರಿ ಅಧ್ಯಯನ ಪೀಠದ ಸಂಯೋಜಕ ಡಾ. ಅಬೂಬಕ್ಕರ್ ಸಿದ್ದೀಕ್ ಸದಸ್ಯ ಕಾರ್ಯದರ್ಶಿಯಾಗಿರುತ್ತಾರೆ ಎಂದು ಪ್ರಕಟನೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News