×
Ad

ಆದಿವಾಸಿ ಕೊರಗ ಸಮುದಾಯದ ಬದುಕಿನೊಂದಿಗೆ ಚೆಲ್ಲಾಟ ಆಡುವುದನ್ನು ಸಹಿಸಲು ಸಾಧ್ಯವಿಲ್ಲ: ಸುನಿಲ್ ಕುಮಾರ್ ಬಜಾಲ್

Update: 2023-10-04 19:51 IST

ಮಂಗಳೂರು, ಅ.4: ಮಂಗಳೂರು ಮಹಾನಗರ ಪಾಲಿಕೆಯ ಆಡಳಿತ ಮತ್ತು ಅಧಿಕಾರಿಗಳು ಜಿಲ್ಲೆಯ ಮೂಲ ನಿವಾಸಿ ಗಳಾಗಿರುವ ಆದಿವಾಸಿ ಕೊರಗ ಸಮುದಾಯದ ಬಗ್ಗೆ ಮಾನವೀಯ ನೆಲೆಯಿಂದ ಕಾರ್ಯಾಚರಿಸುವುದು ಸಂವಿಧಾನದ ಆಶಯವಾಗಿದೆ ಇದಕ್ಕೆ ವ್ಯತಿರಿಕ್ತವಾಗಿ ಕೊರಗ ಸಮುದಾಯದ ಬದುಕಿನೊಂದಿಗೆ ಚೆಲ್ಲಾಟ ಆಡುವುದನ್ನು ಸಹಿಸಲು ಸಾಧ್ಯವಿಲ್ಲ ಎಂದು ಸಿಐಟಿಯು ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಹೇಳಿದ್ದಾರೆ.

ವಾಮಂಜೂರು ಮಂಗಳಜ್ಯೋತಿಯಲ್ಲಿ 2018ರಲ್ಲಿ ಮಂಗಳೂರು ನಗರ ಪಾಲಿಕೆ ಮಂಜೂರು ಮಾಡಿದ 33 ನಿವೇಶನ ರಹಿತ ಕೊರಗ ಕುಟುಂಬಗಳಿಗೆ ನಿವೇಶನ ಮತ್ತು ಭೂ ದಾಖಲೆ ಹಸ್ತಾಂತರ ಮಾಡದಿರುವುದನ್ನು ಖಂಡಿಸಿ ಮಂಗಳೂರು ಮಹಾನಗರ ಪಾಲಿಕೆಯ ಎದುರು ಮಂಗಳವಾರ ಸಂಘಟಿಸಲಾದ ಪ್ರತಿಭಟನಾ ಸಭೆಯನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿಯ ರಾಜ್ಯ ಸಮಿತಿ ಸಹ ಸಂಚಾಲಕರಾದ ಡಾ. ಕೃಷ್ಣಪ್ಪ ಕೊಂಚಾಡಿ,

ಡಿವೈಎಫ್‌ಐ ಜಿಲ್ಲಾ ಅಧ್ಯಕ್ಷ ಬಿ.ಕೆ.ಇಮ್ತಿಯಾಜ್,ಕಾರ್ಯದರ್ಶಿ ಸಂತೋಷ್ ಬಜಾಲ್, ಸಿಐಟಿಯುವಿನ ಜಿಲ್ಲಾ ನಾಯಕರಾದ ಜೆ ಬಾಲಕೃಷ್ಣ ಶೆಟ್ಟಿ, ಸುಕುಮಾರ್ ತೊಕ್ಕೊಟ್ಟು ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿಯ ಕಾನೂನು ಸಲಹೆಗಾರರಾದ ಮನೋಜ್ ವಾಮಂಜೂರು,ಆದಿವಾಸಿ ಸಮಿತಿಯ ಮಂಗಳ ಜ್ಯೋತಿ ಅಧ್ಯಕ್ಷರಾದ ಕರಿಯ.ಕೆ, ಹಾಗೂ ಪುನೀತ್ ರವರು ಮಾತನಾಡಿದರು.

ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿಯ ಜಿಲ್ಲಾ ಮಾರ್ಗದರ್ಶಕ ಯೋಗೀಶ್ ಜೆಪ್ಪಿನಮೊಗರು ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರತಿಭಟನೆಯ ನೇತೃತ್ವವನ್ನು ಶೇಖರ್ ಕೆ ವಾಮಂಜೂರು,ರಶ್ಮಿ ವಾಮಂಜೂರು,ವಿಜ್ಞೇಶ್, ಗಣೇಶ್, ವಿನೋದ್, ರಂಜಿತ್ ಇನ್ನ, ರವೀಂದ್ರ, ಲಿಖಿತ್, ಮಹಿಳಾ ಮುಖಂಡರಾದ ಮಂಜುಳಾ, ಪೂರ್ಣಿಕ, ತುಳಸಿ ಪಡುಬಿದ್ರಿ, ಜಯಚಿತ್ರ, ಕೃಷ್ಣ ಇನ್ನ, ಪೂರ್ಣೇಶ್ ವಹಿಸಿದ್ದರು.

ಪ್ರತಿಭಟನೆಯಲ್ಲಿ ದಲಿತ ಹಕ್ಕುಗಳ ಸಮಿತಿಯ ನಾಯಕರಾದ ಪ್ರಶಾಂತ್ ಎಂಬಿ, ರಾಧಾಕೃಷ್ಣ ಪಾಂಡುರಂಗ, ಶಿವಾನಂದ, ಶಂಕರ್ ಮುದರಂಗಡಿ ,ಮಹಿಳಾ ಮುಖಂಡರಾದ ಅಸುಂತ ಡಿ ಸೋಜ, ಪ್ರಮೀಳಾ ಶಕ್ತಿನಗರ,ಪ್ರಮಿಳಾ ದೇವಾಡಿಗ ಡಿವೈಎಫ್‌ಐ ನಾಯಕರಾದ ರಫೀಕ್ ಬೆಂಗರೆ,ಇಬ್ರಾಹಿಂ ಮದಕ ಮುಂತಾದವರು ಭಾಗವಹಿಸಿದ್ದರು. 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News