ಪುತ್ತೂರು| ಮಾದಕವಸ್ತು ಸೇವಿಸಿ ಅನುಚಿತ ವರ್ತನೆ ಆರೋಪ: ನಾಲ್ವರ ವಿರುದ್ಧ ಪ್ರಕರಣ ದಾಖಲು
ಪುತ್ತೂರು: ಮಾದಕ ವಸ್ತುಗಳನ್ನು ಸೇವನೆ ಮಾಡಿ ಸಾರ್ವಜನಿಕ ಸ್ಥಳದಲ್ಲಿ ಅನುಚಿತ ರೀತಿಯಲ್ಲಿ ವರ್ತಿಸುತ್ತಿದ್ದ ಆರೋಪದಲ್ಲಿ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿದ್ದಾರೆ.
ಪುತ್ತೂರು ತಾಲೂಕಿನ ನೆಕ್ಕಿಲಾಡಿ ನಿವಾಸಿಗಳಾದ ಮುಬಾರಕ್( 21), ಅಬ್ದುಲ್ ಅನಸ್(21), ಕಬಕ ನಿವಾಸಿ ಉಮ್ಮರ್ ಫಾರೂಕ್(41) ಮತ್ತು ಬಂಟ್ವಾಳ ತಾಲೂಕಿನ ಬಿಳಿಯೂರು ನಿವಾಸಿ ಹಿತೇಶ್(21) ಬಂಧಿತ ಆರೋಪಿಗಳು
ಪುತ್ತೂರು ನಗರ ಠಾಣೆಯ ಉಪನಿರೀಕ್ಷಕ ಆಂಜನೇಯ ರೆಡ್ಡಿ, ಸಿಬ್ಬಂದಿಗಳೊಂದಿಗೆ ಠಾಣಾ ವ್ಯಾಪ್ತಿಯಲ್ಲಿ ರೌಂಡ್ಸ್ ಕರ್ತವ್ಯದಲ್ಲಿದ್ದಾಗ ಪುತ್ತೂರು ತಾಲೂಕು ಕಬಕ ಗ್ರಾಮದ ಕಲ್ಲಂದಡ್ಕ ಎಂಬಲ್ಲಿ ಸಾರ್ವಜನಿಕ ಪ್ರದೇಶದಲ್ಲಿ ನಾಲ್ವರು ವ್ಯಕ್ತಿಗಳು ಅನುಚಿತವಾಗಿ ವರ್ತಿಸುತ್ತಿರುವುದಾಗಿ ಮಾಹಿತಿ ಬಂದ ಮೇರೆಗೆ, ಸ್ಥಳಕ್ಕೆ ತೆರಳಿ ಸಾರ್ವಜನಿಕ ಸ್ಥಳದಲ್ಲಿದ್ದ ನಾಲ್ವರು ವ್ಯಕ್ತಿಗಳನ್ನು ತಡೆದು ವಿಚಾರಿಸಿದ್ದರು. ಈ ವೇಳೆ ಮಾದಕ ದ್ರವ್ಯ ಸೇವನೆ ಮಾಡಿದ ಬಗ್ಗೆ ಒಪ್ಪಿಕೊಂಡಿದ್ದರು. ಬಳಿಕ ಅವರನ್ನು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ನಿಷೇದಿತ ಮಾದಕ ವಸ್ತು ಸೇವಿಸಿರುವುದು ದೃಢಪಟ್ಟಿದೆ.
ಈ ಬಗ್ಗೆ ನಾಲ್ವರು ಆರೋಪಿಗಳ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ ಕ್ರ: 105/2025 ಕಲಂ-27(b) NDPS Act ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.