×
Ad

ಕೆನರಾ ಬ್ಯಾಂಕ್ ಪ್ರಾದೇಶಿಕ ಕಚೇರಿಯಲ್ಲಿ ದೇಶ ವಿಭಜನೆಯ ಕರಾಳ ದಿನಾಚರಣೆ

Update: 2024-08-13 22:54 IST

ಮಂಗಳೂರು: ದೇಶ ವಿಭಜನೆಯ ಕರಾಳ ದಿನವನ್ನು ನೆನಪಿಸುವ ನಿಟ್ಟಿನಲ್ಲಿ ದೇಶ ವಿಭಜನೆಯ ಕಾಲದಲ್ಲಿ ನಡೆದ ವಿದ್ಯಮಾ ನಗಳ ತುಣುಕುಗಳ ಪ್ರದರ್ಶನ ಕಾರ್ಯಕ್ರಮ ಜಿಲ್ಲೆಯ ಲೀಡ್ ಬ್ಯಾಂಕ್ ಮಂಗಳೂರಿನ ಕೆನರಾ ಬ್ಯಾಂಕ್ ಪ್ರಾದೇಶಿಕ ಕಚೇರಿಯ ವತಿಯಿಂದ ಬಲ್ಮಠದ ಕೆನರಾ ಬ್ಯಾಂಕ್ ವೃತ್ತ ಕಚೇರಿ ಆವರಣದಲ್ಲಿ ಆಯೋಜಿಸಲಾಗಿದೆ.

ಎರಡು ದಿನಗಳ ಕಾರ್ಯಕ್ರಮವನ್ನು ಮಂಗಳವಾರ ಕೆನರಾ ಬ್ಯಾಂಕ್ ಮಂಗಳೂರು ವೃತ್ತ ಕಚೇರಿಯ ಮಹಾಪ್ರಬಂಧಕ ಬಿ. ಸುಧಾಕರ ಕೊಟ್ಟಾರಿ ಉದ್ಘಾಟನೆ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಡಿಜಿಎಮ್ ಶೈಲೇಂದ್ರನಾಥ್ ಶೀತ್ , ಟಿ ಯು ಜಯಕುಮಾರ್, ಕೆನರಾ ಬ್ಯಾಂಕ್ ಪ್ರಾದೇಶಿಕ ಕಚೇರಿಯ ವ್ಯವಸ್ಥಾಪಕ ಉಮಾಶಂಕರ್ ಪ್ರಸಾದ್ , ದಕ್ಷಿಣ ಕನ್ನಡ ಲೀಡ್ ಬ್ಯಾಂಕ್ ಮುಖ್ಯ ಪ್ರಬಂಧಕರು ಕವಿತಾ ಎನ್.ಶೆಟ್ಟಿ ಮತ್ತು ಬ್ಯಾಂಕ್ ಸಿಬ್ಬಂದಿ ಮತ್ತು ಗ್ರಾಹಕರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News