ದ.ಕ. ಜಿಲ್ಲಾ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ
Update: 2026-01-20 22:27 IST
ಮಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ ಮಂಗಳವಾರ ಅಧಿಕಾರ ವಹಿಸಿಕೊಂಡ ಹಿನ್ನೆಲೆಯಲ್ಲಿ ದ.ಕ.ಜಿಲ್ಲಾ ಬಿಜೆಪಿ ಕಚೇರಿ ಮುಂದೆ ಬಿಜೆಪಿ ನಾಯಕರು, ಕಾರ್ಯಕರ್ತರು ಸಿಹಿ ತಿಂಡಿ ವಿತರಿಸಿ ಸಂಭ್ರಮಾಚರಣೆ ಮಾಡಿದರು.
ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿ, ವಿಧಾನ ಪರಿಷತ್ ಮಾಜಿ ಸದಸ್ಯ ಮೋನಪ್ಪ ಭಂಡಾರಿ, ಮಾಜಿ ಮೇಯರ್‌ಗಳಾದ ಪ್ರೇಮಾನಂದ ಶೆಟ್ಟಿ, ಸುಧೀರ್ ಕಣ್ಣೂರು, ಬಿಜೆಪಿ ಮೋರ್ಚಾದ ಅಧ್ಯಕ್ಷೆ ಡಾ. ಮಂಜುಳಾ ರಾವ್ ಮತ್ತಿತರರು ಉಪಸ್ಥಿತರಿದ್ದರು.