ಚೆಕ್ ವಂಚನೆ ಪ್ರಕರಣ: ಆರೋಪಿಯ ಬಂಧನ
Update: 2025-09-02 21:04 IST
ಉಪ್ಪಿನಂಗಡಿ: ಚೆಕ್ ವಂಚನೆ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಬಜತ್ತೂರು ಗ್ರಾಮದ ನಿವಾಸಿ ಸಜಿತ್ ಕುಮಾರ್ ಅಲಿಯಾಸ್ ಪವನ್ (36) ಎಂಬಾತನನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಮಂಗಳೂರಿನ ಜೆಎಂಎಫ್‍ಸಿ 8 ನೇ ನ್ಯಾಯಾಲಯದಲ್ಲಿ ದಾಖಲಾಗಿದ್ದ ಪ್ರಕರಣವೊಂದರ ವಾರಂಟ್ ಆರೋಪಿ ಯಾಗಿದ್ದ ಈತನನ್ನು ಉಪ್ಪಿನಂಗಡಿ ಪೊಲೀಸ್ ಠಾಣಾ ಎಎಸೈ ದೇವಪ್ಪ ಗೌಡ ಹಾಗೂ ಪಿಸಿ ಮೋಹನ್ ವೈ ಅವರು ಇಲ್ಲಿನ ಬಸ್ ನಿಲ್ದಾಣದ ಬಳಿ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ 3 ತಿಂಗಳ ಸಾದಾ ಶಿಕ್ಷೆಯನ್ನು ವಿಧಿಸಿರುತ್ತದೆ ಎಂದು ತಿಳಿದುಬಂದಿದೆ.