×
Ad

ಮಂಗಳೂರಿಗೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

Update: 2025-12-03 11:55 IST

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದಕ್ಕಾಗಿ ಬುಧವಾರ ಮಂಗಳೂರಿಗೆ ಆಗಮಿಸಿದ್ದಾರೆ.

 

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಮುಖ್ಯಮಂತ್ರಿಯನ್ನು ಗೃಹ ಸಚಿವ ಡಾ.ಜಿ.ಪರಮೇಶ್ವರ್, ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಮಾಜಿ ಸಚಿವ ಬಿ.ರಮಾನಾಥ ರೈ, ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿ, ಐವನ್ ಡಿಸೋಜ ಮತ್ತಿತರರು ಸ್ವಾಗತಿಸಿದರು.

 

ಈ ವೇಳೆ ಮುಖ್ಯಮಂತ್ರಿ ಪೊಲೀಸರಿಂದ ಗೌರವ ರಕ್ಷೆ ಸ್ವೀಕರಿಸಿದರು.

ಶಿವಗಿರಿ ಮಠ, ವರ್ಕಲ ಮತ್ತು ಬ್ರಹ್ಮಶ್ರೀ ನಾರಾಯಣ ಗುರು ಅಧ್ಯಯನ ಪೀಠ, ಮಂಗಳೂರು ವಿಶ್ವವಿದ್ಯಾನಿಲಯದ ಆಶ್ರಯದಲ್ಲಿ ಕೊಣಾಜೆಯ ಮಂಗಳೂರು ವಿಶ್ವವಿದ್ಯಾನಿಲಯ ಕ್ಯಾಂಪಸ್ ನಲ್ಲಿ ನಡೆಯಲಿರುವ ಶ್ರೀ ನಾರಾಯಣ ಗುರು-ಗಾಂಧೀಜಿ ಸಂವಾದ ಶತಮಾನೋತ್ಸವದ ಪ್ರಯುಕ್ತ ಆಯೋಜಿಸಿರುವ ಶ್ರೀ ಮಹಾಗುರುವಿನ ಮಹಾ ಸಮಾಧಿ ಶತಾಬ್ದಿ ಸರ್ವಮತ ಸಮ್ಮೇಳನ ಶತಮಾನೋತ್ಸವ ಕಾರ್ಯಕ್ರಮ ಸಹಿತ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಲುವಾಗಿ ಮುಖ್ಯಮಂತ್ರಿ ಮಂಗಳೂರಿಗೆ ಆಗಮಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News