×
Ad

ಉಳ್ಳಾಲ ದರ್ಗಾ ಅಧ್ಯಕ್ಷರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ

Update: 2023-07-20 23:17 IST

ಮಂಗಳೂರು: ಉಳ್ಳಾಲ ಸಯ್ಯಿದ್ ಮದನಿ ದರ್ಗಾ ಸಂಸ್ಥೆಯ ಅಭಿವೃದ್ಧಿಗಾಗಿ ಉಳ್ಳಾಲ ದರ್ಗಾ ಸಮಿತಿಯ ಅಧ್ಯಕ್ಷರಾದ ಬಿ.ಜಿ ಹನೀಫ್ ಹಾಜಿಯವರು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಮುಖ್ಯಮಂತ್ರಿ ನಿವಾಸದಲ್ಲಿ ಭೇಟಿ ಮಾಡಿ ಸಂಸ್ಥೆಯ ಅಭಿವೃದ್ಧಿಗೆ ಅನುದಾನ ಕೋರಿ ಮನವಿ ಸಲ್ಲಿಸಿದರು.

ಮಹಿಳಾ ಕಾಲೇಜು, ಗ್ರಂಥಾಲಯ ನಿರ್ಮಾಣ, ವಿದ್ಯಾರ್ಥಿಗಳಿಗೆ ವಸತಿ ನಿಲಯ, ಹಾಸ್ಟೆಲ್ ಕಟ್ಟಡ ನಿರ್ಮಾಣ, ಸುಸಜ್ಜಿತ ಗಂಜಿ ಕೇಂದ್ರ ನಿರ್ಮಾಣ, ಕಬರುಸ್ತಾನ ತಡೆಗೋಡೆ ಕಾಮಗಾರಿಕೆ, ಉತ್ತರ ಕರ್ನಾಟಕದಿಂದ ಉಳ್ಳಾಲಕ್ಕೆ ಬಸ್ಸ್ ವ್ಯವಸ್ಥೆ, ಸೇರಿದಂತೆ ಹಲವು ಯೋಜನೆಗಳ ಬಗ್ಗೆ ಅನುದಾನ ಕೋರಿ ಮನವಿ ಸಲ್ಲಿಸಲಾಯಿತು.

ಈ ಸಂದರ್ಭ ಉಪಾಧ್ಯಕ್ಷರಾದ ಅಶ್ರಫ್ ಅಹ್ಮದ್ ರೈಟ್ ವೇ , ಕೋಶಾಧಿಕಾರಿ ನಾಝಿಮ್ ರಹ್ಮಾನ್, ಜತೆ ಕಾರ್ಯದರ್ಶಿ ಇಸಾಕ್ ಮೇಲಂಗಡಿ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News