×
Ad

ಅಗ್ನಿಶಾಮಕ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಮುಖ್ಯಮಂತ್ರಿ ಚಿನ್ನದ ಪದಕ

Update: 2023-10-04 20:37 IST

ಮಂಗಳೂರು: 2021-2022 ಹಾಗೂ 2023ನೇ ಸಾಲಿನ ಮುಖ್ಯಮಂತ್ರಿಗಳ ಚಿನ್ನದ ಪದಕ ಪುರಸ್ಕಾರಕ್ಕೆ ಜಿಲ್ಲೆಯ ಅಗ್ನಿಶಾಮಕ ಅಧಿಕಾರಿ ಮತ್ತು ಸಿಬ್ಬಂದಿಗಳು ಭಾಜನರಾಗಿದ್ದಾರೆ.

ಪಾಂಡೇಶ್ವರ ಅಗ್ನಿಶಾಮಕ ಠಾಣೆಯ ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಭರತ್ ಕುಮಾರ್, ಕದ್ರಿ ಅಗ್ನಿಶಾಮಕ ಠಾಣೆಯ ಜಿಲ್ಲಾಧಿಕಾರಿ ಮಹಮ್ಮದ್ ಝುಲ್ಫಿಕರ್ ನವಾಝ್ ಕೆ ಪಿ, ಜಿಲ್ಲೆಯ ಸಹಾಯಕ ಅಗ್ನಿಶಾಮಕ ಠಾಣಾಧಿಕಾರಿ ರಾಜ್, ಜಿಲ್ಲೆಯ ಮಂಗಳೂರು ತಾಲೂಕಿನ ಆದರ್ಶ ನಗರದ ಪ್ರಮುಖ ಅಗ್ನಿಶಾಮಕ-1647 ಸುದರ್ಶನ್.ಕೆ, ಕಡಬ ತಾಲೂಕಿನ ಕೊಂಬಾರು ಪ್ರಮುಖ ಅಗ್ನಿಶಾಮಕ-2119 ರುಕ್ಮಯ ಗೌಡ ಇ, ಮಂಗಳೂರು ತಾಲೂಕಿನ ಗುರುಪುರ ಗ್ರಾಮದ ಪ್ರಮುಖ ಅಗ್ನಿಶಾಮಕ- 2189 ಸುರೇಶ್ ಶೆಟ್ಟಿ, ಬೆಳ್ತಂಗಡಿ ತಾಲೂಕಿನ ಗರ್ಗಾಡಿ ಗ್ರಾಮದ ಅಗ್ನಿಶಾಮಕ -2427 ಉಸ್ಮಾನ್ ಮುಖ್ಯಮಂತ್ರಿ ಚಿನ್ನದ ಪದಕ ಪಡೆದ ಅಧಿಕಾರಿ ಮತ್ತು ಸಿಬ್ಬಂದಿ‌ ಎಂದು ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News