ಮಕ್ಕಳಿಗೆ ಸಂಬಂಧಿಸಿದ ಪುಸ್ತಕಗಳಿಗೆ ಪ್ರಶಸ್ತಿ : ಅರ್ಜಿ ಆಹ್ವಾನ
ಮಂಗಳೂರು,ಫೆ.2: ಕರ್ನಾಟಕ ಬಾಲ ವಿಕಾಸ ಅಕಾಡಮಿಯು 2024ನೇ ಹಾಗೂ 2025ನೇ ಸಾಲಿನಲ್ಲಿ ಮಕ್ಕಳ ಕ್ಷೇತ್ರದಲ್ಲಿ ರಚಿಸಲ್ಪಟ್ಟ ಆಯ್ದಉತ್ತಮ ಪುಸ್ತಕಗಳಿಗೆ ’ಮಕ್ಕಳ ಪುಸ್ತಕ ಚಂದಿರ ಪ್ರಶಸ್ತಿ’ ನೀಡಲು ಅರ್ಜಿ ಆಹ್ವಾನಿಸಿದೆ.
2024 ಮತ್ತು 2025ನೆ ಸಾಲಿನಲ್ಲಿ ಪ್ರಕಟಗೊಂಡ ಸ್ವರಚಿತ ಕವನ ಸಂಕಲನ, ಕಥಾ ಸಂಕಲನ, ನಾಟಕ, (ಪಠ್ಯಾಧಾರಿತ ಬಿಟ್ಟು) ಮಕ್ಕಳ ಕಾದಂಬರಿ, ವೈಜ್ಞಾನಿಕ ಲೇಖನಗಳ ಸಂಕಲನ, ಅನುವಾದಿತ ಕೃತಿ (ಯಾವುದೇ ಪ್ರಕಾರದ ಮಕ್ಕಳ ಸಾಹಿತ್ಯ) ಮಕ್ಕಳ ಸಾಹಿತ್ಯ ವಿಮರ್ಶಾ ಕೃತಿ (7 ಪ್ರಕಾರದ ಮಕ್ಕಳ ಸಾಹಿತ್ಯ ಕೃತಿಗಳನ್ನು ಪ್ರಶಸ್ತಿಗಾಗಿ ಆಹ್ವಾನಿಸಲಾಗಿದೆ.
ಆದ್ದರಿಂದ ಈ ಕ್ಷೇತ್ರಗಳಲ್ಲಿ ಪ್ರಕಟಗೊಂಡ ಪುಸ್ತಕಗಳನ್ನು ಯಾವ ಸಾಲಿಗೆ ಪರಿಗಣಿಸಬೇಕು ಎಂಬುದರ ಬಗ್ಗೆ ಸ್ಪಷ್ಟವಾಗಿ ನಮೂದಿಸಲು ಹಾಗೂ ಪ್ರಶಸ್ತಿಗಾಗಿ ಪರಿಗಣಿಸಲು/ಮೌಲ್ಯಮಾಪನಗೊಳಿಸಲು ಪ್ರತಿಯೊಂದು ಕೃತಿಯ 4 ಪ್ರತಿಗಳನ್ನು ಹಾಗೂ ಸ್ವವರಗಳನ್ನು ಒಳಗೊಂಡ ಮನಇಯೊಂದಿಗೆ ಫೆ.20ರೊಳಗಾಗಿ ಅಕಾಡಮಿಯ ಕೇಂದ್ರ ಕಚೇರಿಯ ವಿಳಾಸ (ಯೋಜನಾಧಿಕಾರಿಗಳು, ಕರ್ನಾಟಕ ಬಾಲ ವಿಕಾಸ ಅಕಾಡಮಿ, ಚಂದ್ರಿಕಾ ಲೇ ಔಟ್ ಹಿಂಭಾಗ ಕೆಎಚ್‌ಬಿ ಕಾಲನಿ, ಲಕಮನಹಳ್ಳಿ ಧಾರವಾಡ-580004 (ದೂ.ಸಂ: 0836 -2465490)ಕ್ಕೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ದೂ.ಸಂ 8050392209, 7204396275, 9448981944 ನ್ನು ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.