×
Ad

ಡಿ.3ರಂದು ಸಿಎಂ ಸಿದ್ದರಾಮಯ್ಯ ಮಂಗಳೂರಿಗೆ

Update: 2025-12-01 19:47 IST

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿ.3ರಂದು ಮಂಗಳೂರಿಗೆ ಆಗಮಿಸಲಿದ್ದಾರೆ.

ಬೆಳಗ್ಗೆ 11 ಗಂಟೆಗೆ ವಿಶೇಷ ವಿಮಾನದಲ್ಲಿ ಮಂಗಳೂರಿಗೆ ಆಗಮಿಸಲಿರುವರು ಅವರು 11:40ಕ್ಕೆ ಕೊಣಾಜೆ ಮಂಗಳಗಂಗೋತ್ರಿಯಲ್ಲಿ ಶಿವಗಿರಿ ಮಠ ವರ್ಕಲಾ ಶ್ರೀ ನಾರಾಯಣ ಗುರು ಅಧ್ಯಯನ ಪೀಠ, ಮಂಗಳೂರು ವಿಶ್ವವಿದ್ಯಾನಿಲಯದ ಆಶ್ರಯದಲ್ಲಿ ಆಯೋಜಿಸಿಸಲಾದ ಶತಮಾನದ ಪ್ರಸ್ತಾನ ಶ್ರೀನಾರಾಯಣ ಗುರು-ಮಹಾತ್ಮ ಗಾಂಧಿ ಐತಿಹಾಸಿಕ ಸಂವಾದ ಶತಮಾನೋತ್ಸವ , ಶ್ರೀಗುರುವಿನ ಮಹಾಸಮಾಧಿ ಶತಾಬ್ದಿ ಸರ್ವಮತ ಸಮ್ಮೇಳನ , ಯತಿ ಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಮಧ್ಯಾಹ್ನ 12:30ಕ್ಕೆ ಪಿಎ ಕಾಲೇಜು ಆಫ್ ಇಂಜಿನಿಯರಿಂಗ್‌ನ ಪೇಸ್ ಮತ್ತು ಎಐ ಉನ್ನತ ಅಧ್ಯಯನ ಕೇಂದ್ರದ ಶಿಲಾನ್ಯಾಸ, ಪೇಸ್ ಟ್ರೈಡ್ ಪಾರ್ಕ್ ಮತ್ತು ಪೇಸ್ ಸ್ಪೋರ್ಟ್ಸ್ ಅರೆನಾ ಇದರ ಶಿಲಾನ್ಯಾಸ ಮತ್ತು ಪೇಸ್ ಕೇರ್ಸ್ ಸಮುದಾಯ ಸೇವಾ ಯೋಜನೆಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವರು.

ಮಧ್ಯಾಹ್ನ 1:15ಕ್ಕೆ ಮಂಗಳೂರಿನ ಸರ್ಕ್ಯೂಟ್ ಹೌಸ್‌ನಲ್ಲಿ ದ.ಕ. ಜಿಲ್ಲೆಯ ಜನಪ್ರತಿನಿಧಿಗಳು ವಕೀಲರ ಸಂಘದ ನಿಯೋಗ ಭೇಟಿ, ಬಳಿಕ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಸಲಿದ್ದಾರೆ. ಸಂಜೆ 4:30ಕ್ಕೆ ವಿಶೇಷ ವಿಮಾನದ ಮೂಲಕ ಮುಖ್ಯಮಂತ್ರಿಗಳು ಮಂಗಳೂರಿನಿಂದ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News