×
Ad

ಸ್ನೇಹಮಯಿ ಕೃಷ್ಣ ವಿರುದ್ಧ ಬೆಳ್ತಂಗಡಿ ಪೊಲೀಸ್‌ ಠಾಣೆಗೆ ದೂರು

Update: 2025-09-13 22:21 IST

ಸ್ನೇಹಮಯಿ ಕೃಷ್ಣ

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ 2012ರಲ್ಲಿ ಕೊಲೆಯಾದ ಸೌಜನ್ಯಳನ್ನು ಆಕೆಯ ಮಾವ ವಿಠಲ ಗೌಡ ಕೊಲೆ ಮಾಡಿದ್ದಾನೆ ಎಂದು ಆರೋಪ ಮಾಡಿ ಹೇಳಿಕೆ ನೀಡಿದ್ದ ಸ್ನೇಹಮಯಿ ಕೃಷ್ಣ ವಿರುದ್ಧ ಬೆಳ್ತಂಗಡಿ ವೃತ್ತ ನಿರೀಕ್ಷಕರಿಗೆ ವೆಂಕಪ್ಪ ಕೋಟ್ಯಾನ್ ಎಂಬವರು ದೂರು ನೀಡಿದ್ದಾರೆ.

ವೆಂಕಪ್ಪ ಕೋಟ್ಯಾನ್ ನೀಡಿದ ದೂರಿನಲ್ಲಿ ಸ್ನೇಹಮಯಿ ಕೃಷ್ಣ ಅವರು ವಿಠಲ ಗೌಡ ವಿರುದ್ಧ ಪೊಲೀಸರಿಗೆ ದೂರು ನೀಡಿರುವುದಾಗಿ ತಿಳಿಸಿ ಬಳಿಕ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದು, ಇದು ಸೌಜನ್ಯ ಕೊಲೆಗಾರರನ್ನು ಪತ್ತೆ ಹಚ್ಚಬೇಕು ಎಂದು ನಡೆಯುತ್ತಿರುವ ಹೋರಾಟವನ್ನು ದಾರಿ ತಪ್ಪಿಸುವ ದುರುದ್ದೇಶದಿಂದ ಮಾಡಿರುವುದಾಗಿದೆ. ಈತನನ್ನು ಮೈಸೂರಿನಿಂದ ಕರೆಸಿ ಈ ರೀತಿ ಹೇಳಿಕೆ ನೀಡಿರುವುದರ ಹಿಂದೆ ಯಾರೋ ಇರುವ ಅನುಮಾನವಿದೆ. ಆದ್ದರಿಂದ ಸ್ನೇಹಮಯಿ ಕೃಷ್ಣಯನ್ನು ಠಾಣೆಗೆ ಕರೆಸಿ ಕುಲಂಕುಷವಾಗಿ ವಿಚಾರಣೆ ನಡೆಸಬೇಕು ಹಾಗೂ ದೂರು ನೀಡಲು ಪ್ರೇರೇಪಿಸಿದವರನ್ನು ಪತ್ತೆ ಹಚ್ಚಿ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಒತ್ತಾಯಿಸಲಾಗಿದೆ.

ಬೆಳ್ತಂಗಡಿ ಪೊಲೀಸರು ದೂರನ್ನು ಸ್ವೀಕರಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News