ಯಕ್ಷಗಾನ ಕಲಾವಿದರ ಅವಹೇಳನ ಆರೋಪ: ಪ್ರೊ.ಬಿಳಿಮಲೆ ವಿರುದ್ಧ ದೂರು
Update: 2025-11-22 15:38 IST
ಪ್ರೊ.ಪುರುಷೋತ್ತಮ ಬಿಳಿಮಲೆ
ಮಂಗಳೂರು: ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆಯವರು ಯಕ್ಷಗಾನ ಕಲಾವಿದರ ಬಗ್ಗೆ ಅವಹೇಳಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಅವರ ವಿರುದ್ಧ ಉರ್ವ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಯಕ್ಷಗಾನ ಕಲಾವಿದ ರವಿ ಅಲೆವೂರಾಯ ಈ ದೂರು ನೀಡಿದ್ದು, ಯಕ್ಷಗಾನ ಕಲೆ ಮತ್ತು ಕಲಾವಿದರಿಗೆ ಅವಮಾನವಾಗುವ ರೀತಿಯಲ್ಲಿ ಹೇಳಿಕೆ ನೀಡಿರುವ ಪ್ರೊ.ಪುರುಷೋತ್ತಮ ಬಿಳಿಮಲೆ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಒತ್ತಾಯಿಸಿದ್ದಾರೆ.
ಎಫ್ಐಆರ್ ದಾಖಲಿಸುವಂತಹ ಪ್ರಕರಣವಲ್ಲ: ಮಂಗಳೂರು ಕಮಿಷನರ್
ಯಕ್ಷಗಾನ ಕಲಾವಿದ ರವಿ ಅಲೆವೂರಾಯ ಎಂಬವರು ದೂರು ನೀಡಿದ್ದಾರೆ. ಇದು ಮಾನನಷ್ಟ ಪ್ರಕರಣ. ಪೋಲಿಸರು ಎಫ್ಐಆರ್ ಹಾಕಿ ತನಿಖೆ ಮಾಡುವ ಪ್ರಕರಣ ಅಲ್ಲ. ದೂರುದಾರರು ನ್ಯಾಯಾಲಯವನ್ನು ಸಂಪರ್ಕಿಸಬೇಕು ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ತಿಳಿಸಿದ್ದಾರೆ.