×
Ad

ಬಂಟ್ವಾಳ ಬಿಜೆಪಿ ಕ್ಷೇತ್ರ ಸಮಿತಿಯಿಂದ ನಳಿನ್ ಕುಮಾರ್ ರಿಗೆ ಅಭಿನಂದನೆ ಕಾರ್ಯಕ್ರಮ

Update: 2023-11-23 15:49 IST

ಬಂಟ್ವಾಳ, ನ.23: ಸಂಸದ ಹಾಗೂ ಬಿಜೆಪಿಯ ನಿಕಟಪೂರ್ವ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರಿಗೆ ಬಂಟ್ವಾಳ ಬಿಜೆಪಿ ಕ್ಷೇತ್ರ ಸಮಿತಿಯ ವತಿಯಿಂದ ಅಭಿನಂದನೆ ಕಾರ್ಯಕ್ರಮ ಬಿ.ಸಿ.ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ಬುಧವಾರ ನಡೆಯಿತು.

ಅಭಿನಂದನೆ ಸ್ವೀಕರಿಸಿ ಮಾತನಾಡಿದ ನಳಿನ್ ಕುಮಾರ್ ಕಟೀಲು, ಸಂಘಟನಾ ಹಿರಿಯರ ಸೂಚನೆಯತೆ ನಾನು ಲೋಕಸಭಾ ಚುನಾವಣೆಗೆ ಮೂರು ಬಾರಿ ಸ್ಪರ್ಧಿಸಿದ್ದೇನೆ. ನನಗೆ ಎಲ್ಲ ಹಂತದಲ್ಲಿ ಬೆಳೆಯಲು ಕಾರಣವಾದ ಬಂಟ್ವಾಳವನ್ನು ಎಂದಿಗೂ ಮರೆಯುವುದಿಲ್ಲ. ನಿಮ್ಮೆಲ್ಲರ ಗೌರವಕ್ಕೆ ಚ್ಯುತಿ ಬಾರದಂತೆ ರಾಜಕಾರಣ ಮಾಡಿದ್ದೇನೆ, ಮುಂದೆಯೂ ಮಾಡುತ್ತೇನೆ ಎಂದು ಹೇಳಿದರು.

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಮಾತನಾಡಿ, ನಳಿನ್ ಮತ್ತು ನನ್ನ ಬಾಂಧವ್ಯ ಚುನಾವಣೆ ಹಾಗೂ ರಾಜಕೀಯಕ್ಕೂ ಮೀರಿದ್ದು, ಪಕ್ಷ ಸಂಘಟನೆಯಲ್ಲಿ ಎಲ್ಲವನ್ನೂ ಎದುರಿಸಿ ಮುನ್ನಡೆಸಿದವರು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬಂಟ್ವಾಳ ಬಿಜೆಪಿ ಕ್ಷೇತ್ರ ಸಮಿತಿಯ ಅಧ್ಯಕ್ಷ ದೇವಪ್ಪ ಪೂಜಾರಿ ಮಾತನಾಡಿ, ಬಿಜೆಪಿ ಹಾಗೂ ಪರಿವಾರಗಳ ನಡುವೆ ಯಾವುದೇ ಮನಸ್ತಾಪವಿಲ್ಲ, ಮುಂದಿನ ದಿನಗಳಲ್ಲಿ ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಒಟ್ಟಾಗಿ ಕಾರ್ಯಪ್ರವೃತ್ತರಾಗಲಿದ್ದೇವೆ. ಈ ಬಗ್ಗೆ ಯಾರಿಗೂ ಯಾವುದೇ ಸಂದೇಹ ಬೇಡ ಎಂದರು.

ಬುಡಾ ಮಾಜಿ ಅಧ್ಯಕ್ಷ ದೇವದಾಸ ಶೆಟ್ಟಿಯವರು ನಳಿನ್ ಕುಮಾರ್ ಅವರನ್ನು ಅಭಿನಂದಿಸಿ ಮಾತನಾಡಿದರು. ಮಾಜಿ ಶಾಸಕರಾದ ಎ.ರುಕ್ಮಯ ಪೂಜಾರಿ, ಕೆ ಪದ್ಮನಾಭ ಕೊಟ್ಟಾರಿ, ಕಿಯೋನಿಕ್ಸ್ ಮಾಜಿ ಅಧ್ಯಕ್ಷ ಕೆ.ಹರಿಕೃಷ್ಣ ಬಂಟ್ವಾಳ್

ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರ್, ಪ್ರಧಾನ ಕಾರ್ಯದರ್ಶಿಗಳಾದ ರಾಮದಾಸ ಬಂಟ್ವಾಳ, ಕಸ್ತೂರಿ ಪಂಜ, ಪಕ್ಷದ ನಾಯಕಿ ಸುಲೋಚನಾ ಜಿ.ಕೆ.ಭಟ್ ಉಪಸ್ಥಿತರಿದ್ದರು.

ಬಿಜೆಪಿ ಕ್ಷೇತ್ರಾಧ್ಯಕ್ಷ ದೇವಪ್ಪ ಪೂಜಾರಿ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ರವೀಶ ಶೆಟ್ಟಿ ಕರ್ಕಳ ವಂದಿಸಿದರು. ಕ್ಷೇತ್ರ ಪ್ರಧಾನ ಕಾರ್ಯದರ್ಶಿ ಡೊಂಬಯ ಅರಳ ಕಾರ್ಯಕ್ರಮ ನಿರ್ವಹಿಸಿದರು.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News