×
Ad

ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ: ಹೈಕೋರ್ಟ್ ನಿಂದ SIT, ED ಸೇರಿದಂತೆ 7 ಪ್ರತಿವಾದಿಗಳಿಗೆ ತನಿಖಾ ವರದಿ ಸಲ್ಲಿಸುವಂತೆ ನೋಟೀಸ್ ಜಾರಿ

Update: 2025-10-09 22:58 IST

ಬೆಳ್ತಂಗಡಿ : ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ ಆರೋಪಕ್ಕೆ ಸಂಬಂಧಿಸಿದಂತೆ ರಿಟ್ ಅರ್ಜಿಯ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ SIT, ED, ಪೊಲೀಸ್ ಅಧಿಕಾರಿಗಳು ಸೇರಿದಂತೆ 7 ಪ್ರತಿವಾದಿಗಳಿಗೆ ನೋಟೀಸ್ ಜಾರಿ ಮಾಡಿದೆ.

ಷಡ್ಯಂತ್ರದ ಬಗ್ಗೆ ತೇಜಸ್ ಗೌಡ ಮತ್ತು ಇತರರು ವಿಶೇಷ ತನಿಖಾ ದಳಕ್ಕೆ ದೂರು ನೀಡಿದ್ದರು. ಈ ದೂರಿಗೆ ಸಂಬಂಧಿಸಿದಂತೆ ಈ ಅರ್ಜಿದಾರರು ಕರ್ನಾಟಕದ ಉಚ್ಛ ನ್ಯಾಯಾಲಯದಲ್ಲಿ ರಿಟ್ ಅರ್ಜಿಯನ್ನು ಸಲ್ಲಿಸಿದ್ದು, ಅ.9 ರಂದು ವಿಚಾರಣೆಗೆ ಬಂದಿತ್ತು.

ಅರ್ಜಿಯನ್ನು ಪರಿಗಣಿಸಿದ ನ್ಯಾಯಾಲಯವು SIT, ED, INCOME TAX, DG&IGP, SP, ಕರ್ನಾಟಕ ಸರಕಾರ, ಬೆಂಗಳೂರು ಕಮಿಷನರ್ ಸೇರಿದಂತೆ ಒಟ್ಟು ಏಳು ಪ್ರತಿವಾದಿಗಳಿಗೆ ಈ ದೂರಿಗೆ ಸಂಬಂಧಿಸಿದಂತೆ ನಡೆದಿರುವ ತನಿಖಾ ವರದಿಯನ್ನು ಸಲ್ಲಿಸುವಂತೆ ನೋಟೀಸ್ ಜಾರಿ ಮಾಡಿದೆ.

ಪ್ರತಿವಾದಿಗಳಿಗೆ ತಕ್ಷಣ ವರದಿ ಸಲ್ಲಿಸುವಂತೆ ಹೈಕೋರ್ಟ್ ಸೂಚಿಸಿದೆ. ದೂರುದಾರ ತೇಜಸ್ ಗೌಡ ಅವರ ಪರ ವಕೀಲ ಕೇತನ್ ಕುಮಾರ್ ವಾದ ಮಂಡಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News