×
Ad

ವೆನ್‌ಲಾಕ್ ಆಸ್ಪತ್ರೆಗೆ ನೂತನ ಒಪಿಡಿ ಬ್ಲಾಕ್ ಕಟ್ಟಡ ನಿರ್ಮಾಣ ಶೀಘ್ರ ಆರಂಭ: ಸಚಿವ ದಿನೇಶ್ ಗುಂಡೂರಾವ್

Update: 2026-01-28 22:22 IST

ಮಂಗಳೂರು, ಜ.28: ಬಡ ಮಧ್ಯಮ ವರ್ಗದ ಜನರಿಗೆ ಅನುಕೂಲ ವಾಗಬೇಕೆಂಬ ನೆಲೆಯಲ್ಲಿ ವೆನ್ಲಾಕ್ ಸರಕಾರಿ ಆಸ್ಪತ್ರೆಗೆ 70 ಕೋಟಿ ಒಪಿಡಿ ಬ್ಲಾಕ್ ಕಟ್ಟಡ ನಿರ್ಮಾಣ ಕಾಮಗಾರಿ ಶೀಘ್ರದಲ್ಲೇ ಪ್ರಾರಂಭವಾಗಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ , ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂ ರಾವ್ ತಿಳಿಸಿದ್ದಾರೆ.

ಮೊದಲನೇ ಹಂತದಲ್ಲಿ 35 ಕೋಟಿ ವೆಚ್ಚದಲ್ಲಿ ನೂತನ ಎರಡು ಅಂತಸ್ತಿನ ಒಪಿಡಿ ಕಟ್ಟಡ ನಿರ್ಮಾಣಕ್ಕೆ ಸದ್ಯದಲ್ಲಿಯೇ ಟೆಂಡರ್ ಆಹ್ವಾನಿಸಲಾಗುವುದು. ಈ ಕಟ್ಟಡದಲ್ಲಿ ಸೌರವಿದ್ಯುತ್ ಘಟಕವೂ ಇರಲಿದ್ದು, ಸಿಸಿ ಟಿವಿ ಅಳವಡಿಸಲಾಗು ವುದು ಎಂದು ಮಾಹಿತಿ ನೀಡಿದರು.

ವೆನ್ಲಾಕ್ ಆಸ್ಪತ್ರೆಯನ್ನು ಮಾದರಿ ಆಸ್ಪತ್ರೆಯಾಗಿ ನಿರ್ಮಾಣ ಮಾಡುವುದು ಆರೋಗ್ಯ ಇಲಾಖೆಯ ಗುರಿಯಾಗಿದ್ದು, ಎಲ್ಲ ರೀತಿಯ ಸೌಲಭ್ಯ ದೊರೆಯಬೇಕು ಮತ್ತು ಸಾರ್ವಜನಿಕರಿಗೆ ಅನುಕೂಲವಾಗಬೇಕು ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News