×
Ad

ಗಾಂಜಾ ಸೇವಿಸಿ ಸಾರ್ವಜನಿಕರಿಗೆ ತೊಂದರೆ: ಆರೋಪಿ ಸೆರೆ

Update: 2023-08-01 23:32 IST

ಬಂಟ್ವಾಳ : ಗಾಂಜಾ ಸೇವಿಸಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ಆರೋಪದಲ್ಲಿ ವ್ಯಕ್ತಿಯೋರ್ವನನ್ನು ಬಂಟ್ವಾಳ ನಗರ ಪೊಲೀಸರು ನಂದಾವರದಲ್ಲಿ ಬಂಧಿಸಿರುವ ಬಗ್ಗೆ ವರದಿಯಾಗಿದೆ.

ಬಂಧಿತ ಆರೋಪಿ ಬೆಳ್ತಂಗಡಿ ತಾಲೂಕಿನ ಬಾರ್ಯ ಗ್ರಾಮದ ಕಲೆಂಜಿಬೈಲು ನಿವಾಸಿ ಅಬ್ದುಲ್ ಸಲೀಂ ( 32) ಎಂಬಾತನಾಗಿದ್ದು, ಈತ ಸಜೀಪ ಮುನ್ನೂರು ಗ್ರಾಮದ ನಂದಾವರದ ತನ್ನ ಸಂಬಂಧಿಕರ ಮನೆಗೆ ಬಂದಿದ್ದು, ನಂದಾವರ ಜಂಕ್ಷನ್ ನಲ್ಲಿ ಮಾದಕ ವಸ್ತು ಸೇವಿಸಿದ ನಶೆಯಲ್ಲಿ ತೊಂದರೆ ನೀಡುತ್ತಿದ್ದ ವೇಳೆ ಅಲ್ಲಿನ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು.

ಈ ಹಿನ್ನೆಲೆಯಲ್ಲಿ ಬಂಟ್ವಾಳ ನಗರ ಪೋಲೀಸ್ ಠಾಣಾ ಎಸ್.ಐ. ರಾಮಕೃಷ್ಣ ನೇತ್ರತ್ವದ ಪೋಲೀಸರ ತಂಡ ಆರೋಪಿಯನ್ನು ನಂದಾವರದಲ್ಲಿ ಬಂಧಿಸಿ ವೈದ್ಯಕೀಯ ತಪಾಸಣೆ ನಡೆಸಿದ್ದು, ಗಾಂಜಾ ಸೇವನೆ ದೃಢಪಟ್ಟಿದೆ. ಈತನ ವಿರುದ್ಧ ಪ್ರಕರಣ ದಾಖಲಿಸಿಕೊಂಡು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ಈತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News