×
Ad

ಜಾಲ್ಸೂರಿನಲ್ಲಿ ಕಂಟೈನರ್ ಲಾರಿ-ಕಾರಿನ ನಡುವೆ ಅಪಘಾತ; ನಾಲ್ಕು ಮಂದಿಗೆ ಗಾಯ

Update: 2023-07-25 22:38 IST

ಸುಳ್ಯ: ಕಂಟೈನರ್ ಲಾರಿ ಹಾಗೂ ಕಾರಿನ ಮಧ್ಯೆ ಅಪಘಾತ ಸಂಭವಿಸಿ, ಕಾರಿನಲ್ಲಿದ್ದವರು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಜಾಲ್ಸೂರು ಗ್ರಾಮದ ನಡುವಡ್ಕದಲ್ಲಿ ಮಂಗಳವಾರ ನಡೆದಿದೆ.

ಮಂಗಳೂರಿನಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಕಂಟೈನರ್ ಲಾರಿ ಜಾಲ್ಸೂರು ದಾಟಿ ನಡುವಡ್ಕಕ್ಕೆ ತಲುಪಿದ ವೇಳೆ ವಿರುದ್ಧ ದಿಕ್ಕಿನಲ್ಲಿ ಸಂಚರಿಸಿ, ಸುಳ್ಯದಿಂದ ಮಂಗಳೂರಿಗೆ ತೆರಳುತ್ತಿದ್ದ ಕಾರಿಗೆ ಢಿಕ್ಕಿ ಹೊಡೆದಿದೆ. ಪರಿಣಾಮ ಕಾರಿನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಕಲ್ಲುಗುಂಡಿಯ ಖಲೀಲ್ ಮತ್ತು ಅವರ ಮನೆಯವರು ಸೇರಿ ನಾಲ್ಕು ಮಂದಿಗೆ ಗಾಯಗಳಾಗಿದ್ದು, ಸ್ಥಳೀಯರ ನೆರವಿನಿಂದ ಸುಳ್ಯದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ಕೊಡಿಸಿ, ಕೆವಿಜಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಂಟೈನರ್ ಲಾರಿ ಚಾಲಕನ ಅಜಾಗರೂಕತೆಯಿಂದ ಅಪಘಾತ ಸಂಭವಿಸಿದ್ದು, ಸುಳ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News