×
Ad

ಡಿ. 20: ದ.ಕ. ಜಿಲ್ಲಾ ಮಟ್ಟದ ದಫ್ ಸ್ಪರ್ಧೆ

Update: 2025-12-19 19:15 IST

ಮಂಗಳೂರು, ಡಿ.19: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯು ಜೋಗಿಬೆಟ್ಟು ರಿಫಾಯಿ ಜುಮಾ ಮಸ್ಜಿದ್ ಆಡಳಿತ ಸಮಿತಿಯ ಸಹಯೋಗದೊಂದಿಗೆ ಡಿ.20ರಂದು ದ.ಕ. ಜಿಲ್ಲಾ ಮಟ್ಟದ ದಫ್ ಸ್ಪರ್ಧೆಯನ್ನು ಆಯೋಜಿಸಿದೆ.

ಬೆಳ್ತಂಗಡಿ ತಾಲೂಕಿನ ಜೋಗಿಬೆಟ್ಟು ರಿಫಾಯಿ ಜುಮಾ ಮಸ್ಜಿದ್ ಆವರಣದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ರಿಫಾಯಿ ಜುಮಾ ಮಸ್ಜಿದ್‌ನ ಖತೀಬ್ ಅಲ್‌ಹಾಜ್ ಯು.ಕೆ.ಖಲಂದರ್ ಮದನಿ ಉದ್ಘಾಟಿಸಲಿದ್ದಾರೆ. ಬ್ಯಾರಿ ಅಕಾಡಮಿಯ ಅಧ್ಯಕ್ಷ ಉಮರ್ ಯು.ಎಚ್. ಅಧ್ಯಕ್ಷತೆ ವಹಿಸಲಿದ್ದಾರೆ. ರಿಫಾಯಿ ಜುಮಾ ಮಸ್ಜಿದ್ ಆಡಳಿತ ಸಮಿತಿಯ ಅಧ್ಯಕ್ಷ ಎಂ.ಜಿ. ಅಬೂಬಕರ್ ಪುತ್ತು ಸ್ಪರ್ಧೆಯ ನೇತೃತ್ವ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಬಿ ಹ್ಯೂಮನ್ ಅಧ್ಯಕ್ಷ ಹಾಜಿ ಬಿ.ಎಂ. ಶರೀಫ್ ವೈಟ್‌ಸ್ಟೋನ್, ಹಿದಾಯ ಫೌಂಡೇಶನ್ ಅಧ್ಯಕ್ಷ ಹಾಜಿ ಮುಹಮ್ಮದ್ ಹನೀಫ್ ಗೋಳ್ತಮಜಲು, ಎಂ. ಫ್ರೆಂಡ್ಸ್ ಚಾರಿಟೆಬಲ್ ಟ್ರಸ್ಟ್ ಸ್ಥಾಪಕ ರಶೀದ್ ವಿಟ್ಲ, ಪೊಲೀಸ್ ಇನ್‌ಸ್ಪೆಕ್ಟರ್ ರವಿ ಬಿ.ಎಸ್., ಉದ್ಯಮಿಗಳಾದ ಉಮರ್ ಹಾಜಿ, ಅಬ್ದುಲ್ ಸಲೀಂ ದಾವೂದ್, ಅಶ್ರಫ್, ಜೋಗಿಬೆಟ್ಟು ಖುವ್ವತುಲ್ ಇಸ್ಲಾಂ ಯಂಗ್‌ಮೆನ್ಸ್ ಅಧ್ಯಕ್ಷ ಅಶ್ರಫ್ ಎಂ.ಜಿ. ಭಾಗವಹಿಸಲಿದ್ದಾರೆ.

ದ.ಕ. ಜಿಲ್ಲೆಯ ತಾಲೂಕು ಮಟ್ಟಗಳಲ್ಲಿ ಅಕಾಡಮಿಯು ಹಮ್ಮಿಕೊಂಡಿದ್ದ ದಫ್ ಸ್ಪರ್ಧೆಗಳಲ್ಲಿ ಮೊದಲ ಮತ್ತು ಎರಡನೇಯ ಸ್ಥಾನ ಗಳಿಸಿರುವ ತಂಡಗಳು ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲಿವೆ ಎಂದು ಅಕಾಡಮಿಯ ಪ್ರಕಟನೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News