×
Ad

ಕುಂಪಲ ದೇವಸ್ಥಾನದ ಬ್ರಹ್ಮಕಲಶೋತ್ಸವ ಫ್ಲೆಕ್ಸ್‌ಗೆ ಹಾನಿ: ಆರೋಪಿ ಚೇತನ್ ವಿರುದ್ಧ ಪ್ರಕರಣ ದಾಖಲು‌

Update: 2024-01-20 23:59 IST

ಉಳ್ಳಾಲ: ಕುಂಪಲದ ಶ್ರೀ ಆದಿಶಕ್ತಿ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಶುಭಕೋರಿ ಹಾಕಲಾದ ಫ್ಲೆಕ್ಸ್‌ಗೆ ಹಾನಿ ಮಾಡಿದ ಘಟನೆ ನಡೆದಿದೆ.

ಕೃತ್ಯ ಎಸಗಿದ ಆರೋಪಿ ಚೇತನ್ ಎಂಬಾತನ ವಿರುದ್ಧ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯ ವಿವರ: ಕುಂಪಲದ ಶ್ರೀ ಆದಿಶಕ್ತಿ ದೇವಸ್ಥಾನದಲ್ಲಿ ನಡೆಯುವ ಬ್ರಹ್ಮಕಲಶೋತ್ಸವದ ಪ್ರಯುಕ್ತ ಶುಭಕೋರಿ ಕುಂಪಲ ಬಳಿ ಫ್ಲೆಕ್ಸ್‌ ಅಳವಡಿಸಲಾಗಿತ್ತು. ಈ ಫ್ಲೆಕ್ಸ್‌ ನಲ್ಲಿ ಸ್ಪೀಕರ್ ಯು. ಟಿ. ಖಾದರ್ ಮತ್ತು ಶ್ರೀ ಆದಿಶಕ್ತಿ ದೇವರ ಚಿತ್ರ ಮುದ್ರಿತವಾಗಿತ್ತು. ಆರೋಪಿ ಚೇತನ್ ಯುಟಿ ಖಾದರ್ ಮತ್ತು ಶ್ರೀ ಆದಿಶಕ್ತಿ ದೇವರ ಚಿತ್ರಕ್ಕೆ ಹಾನಿ ಮಾಡಿದ್ದಾನೆ ಎಂದು ತಿಳಿದು ಬಂದಿದೆ. ಸಮಾಜದಲ್ಲಿ ಶಾಂತಿ ಭಂಗ ಉಂಟು ಮಾಡುವ ದುರುದ್ದೇಶದಿಂದ ಆತ ಈ ಕೃತ್ಯ ಎಸಗಿ ಪರಾರಿ ಆಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News