×
Ad

ಮಂಗಳೂರು ವಿಮಾನ ನಿಲ್ದಾಣದಲ್ಲಿ ದಸರಾ ಸಂಭ್ರಮ

Update: 2023-10-21 22:33 IST

ಮಂಗಳೂರು : ಮಂಗಳೂರು ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಸಂಗೀತ, ನೃತ್ಯ, ಪಿಲಿ ನಲಿಕೆ ಸೇರಿದಂತೆ ವಿವಿಧ ಕಾರ್ಯಕ್ರಮಗಳೊಂದಿಗೆ ದಸರಾ ಮಹೋತ್ಸವ ನಡೆಯಿತು.

ವಿಮಾನ ನಿಲ್ದಾಣಕ್ಕೆ ಸಂಬಂಧಿಸಿದ ಘಟಕಗಳ ಕಲಾವಿದರು ತಮ್ಮ ಸುಪ್ತ ಪ್ರತಿಭೆಯನ್ನು ಪ್ರದರ್ಶಿಸಿದರು. ಎಟಿಸಿ ಗಿಲ್ಡ್‌ನ ಸಾರಂಗ್ ಶ್ರೀವಾಸ್ತವ ಅವರು ನುಸ್ರತ್ ಫತೇಹ್ ಅಲಿ ಖಾನ್ ಹಾಡನ್ನು ಹಾಡುವ ಮೂಲಕ ಪ್ರೇಕ್ಷಕರಿಗೆ ಸಖತ್ ಮನರಂಜನೆ ನೀಡಿದರು. ಲೈವ್ ಸಂಗೀತ ಮತ್ತು ಪಿಲಿ ನಲಿಕೆ ಕಾರ್ಯಕ್ರಮ ನಡೆಯಿತು.

ನಗರದ ವೃತ್ತಿಪರ ಕಾಲೇಜಿನ ವಿದ್ಯಾರ್ಥಿಗಳು ನೃತ್ಯದ ರೋಮಾಂಚಕ ಪ್ರದರ್ಶನ ನೀಡಿದರು.

ಮಂಗಳೂರು ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣವು ಪ್ರಯಾಣಿಕರೊಂದಿಗೆ ದಸರಾವನ್ನು ಆಚರಿಸಲಿದೆ . ಅಕ್ಟೋಬರ್ 24ರ ವಿಜಯದಶಮಿ ದಿನದವರೆಗೆ ಟರ್ಮಿನಲ್‌ನಲ್ಲಿ ಆಚರಣೆ ಮುಂದುವರಿಯಲಿದೆ ಎಂದು ಪ್ರಕಟನೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News