ಡಿ.13: ಯುನಿವೆಫ್‌ನಿಂದ ಬೆಂಗಳೂರಿನಲ್ಲಿ ವಿಚಾರಗೋಷ್ಠಿ
ಮಂಗಳೂರು, ಡಿ.12: ಯುನಿವೆಫ್ ಕರ್ನಾಟಕ ಹಮ್ಮಿಕೊಂಡಿರುವ 20ನೇ ವರ್ಷದ ಅರಿಯಿರಿ ಮನುಕುಲದ ಪ್ರವಾದಿಯನ್ನು ಅಭಿಯಾನದ ಪ್ರಯುಕ್ತ ಡಿ.13ರ ಶನಿವಾರ ಸಂಜೆ 7ಕ್ಕೆ ಬೆಂಗಳೂರಿನ ಎಚ್.ಬಿ.ಆರ್. ಲೇ ಔಟ್ನ ಬಿಡಿಎ ಕಾಂಪ್ಲೆಕ್ಸ್ ಮುಂಭಾಗದ ಬ್ಯಾರಿ ಸೌಹಾರ್ದ ಭವನದಲ್ಲಿ ಶೋಷಿತ ಸಮಾಜ ಹಾಗೂ ಮಾನವ ಘನತೆ ಮತ್ತು ಪ್ರವಾದಿ ಮುಹಮ್ಮದ್ (ಸ) ಎಂಬ ವಿಷಯದಲ್ಲಿ ವಿಚಾರಗೋಷ್ಠಿ ನಡೆಯಲಿದೆ.
ಸಾಹಿತಿ, ನಿರ್ದೇಶಕ, ಆಪ್ತ ಸಮಾಲೋಚಕ ಯೋಗೇಶ್ ಮಾಸ್ಟರ್ ಹಾಗೂ ಸಿ.ಎಸ್.ಐ. ಬೆಂಗಳೂರು ಇದರ ಉಸ್ತುವಾರಿ ಪ್ರೆಸ್ಬಿಟರ್ ರೆ.ಡಾ.ಡಿ. ಮನೋಹರ್ ಚಂದ್ರಪ್ರಸಾದ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಯುನಿವೆಫ್ ಅಧ್ಯಕ್ಷ ರಫೀಉದ್ದೀನ್ ಕುದ್ರೋಳಿ ಅಧ್ಯಕ್ಷತೆ ವಹಿಸಲಿದ್ದಾರೆ. ಬ್ಯಾರೀಸ್ ವೆಲ್ಫೇರ್ ಅಸೋಸಿಯೇಶನ್ ನ ಅಧ್ಯಕ್ಷ ಬಿ. ಶಂಸುದ್ದೀನ್ ಅಡೂರು, ಬ್ಯಾರಿಸ್ ಸೆಂಟ್ರಲ್ ಕಮಿಟಿಯ ಅಧ್ಯಕ್ಷ ಬಿ. ಶಬೀರ್ ಬ್ರಿಗೇಡ್, ಎಂಎಂವೈಸಿ ಅಧ್ಯಕ್ಷ ಬಿ. ಅಬೂಬಕರ್ ಎಚ್, ಸೀರತ್ ಅಭಿಯಾನದ ಸಂಚಾಲಕ ಯು. ಕೆ. ಖಾಲಿದ್, ಕಾರ್ಯಕ್ರಮದ ಸಂಚಾಲಕ ಮುಹಮ್ಮದ್ ಸೈಫುದ್ದೀನ್ ಮತ್ತಿತರರು ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.