ಡಿ. 27: ಗಜೇಂದ್ರಗಡದಲ್ಲಿ ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ ಪ್ರದಾನ ಕಾರ್ಯಕ್ರಮ
ಮಂಗಳೂರು, ಡಿ.25: ಮುಸ್ಲಿಮ್ ಲೇಖಕರ ಸಂಘವು ಮರ್ಹೂಮ್ ಯು.ಟಿ. ಫರೀದ್ ಸ್ಮರಣಾರ್ಥ ಕೊಡಮಾಡುವ 2024ನೇ ಸಾಲಿನ ರಾಜ್ಯ ಮಟ್ಟದ ’ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ’ ಪ್ರದಾನ ಹಾಗೂ ಕನ್ನಡ ಮತ್ತು ಉರ್ದು ಕವಿಗೋಷ್ಠಿಯು ಡಿ.27ರಂದು ಬೆಳಗ್ಗೆ 10:30ಕ್ಕೆ ಗಜೇಂದ್ರಗಡದ ಶ್ರೀಜಗದ್ಗುರು ತೋಂಟದಾರ್ಯ ಸಿಬಿಎಸ್‌ಇ ಶಾಲಾ ಸಭಾಂಗಣದಲ್ಲಿ ನಡೆಯಲಿದೆ.
ಸ್ಪೀಕರ್ ಯು.ಟಿ. ಖಾದರ್ ಪ್ರಶಸ್ತಿ ಪ್ರದಾನ ಮಾಡಲಿದ್ದು, ಡಾ.ಐ.ಜೆ. ಮ್ಯಾಗೇರಿ (ಕೃತಿ: ಜೈಲ್ ಡೈರಿ) ಪ್ರಶಸ್ತಿ ಸ್ವೀಕರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಚಿವ ಡಾ.ಎಚ್.ಕೆ. ಪಾಟೀಲ್, ಸರಕಾರದ ಮುಖ್ಯ ಸಚೇತಕ ಸಲೀಂ ಅಹ್ಮದ್, ಕರ್ನಾಟಕ ರಾಜ್ಯ ಖನಿಜ ಅಭಿವೃದ್ಧಿ ನಿಗಮದ ಅಧ್ಯಕ್ಷ, ಶಾಸಕ ಜಿ.ಎಸ್. ಪಾಟೀಲ್, ಶಾಸಕ ಯಾಸಿರ್ ಅಹ್ಮದ್ ಖಾನ್ ಪಠಾಣ್ ಭಾಗವಹಿಸಲಿದ್ದಾರೆ. ಮುಸ್ಲಿಮ್ ಲೇಖಕರ ಸಂಘದ ಅಧ್ಯಕ್ಷ ಉಮರ್ ಯು.ಎಚ್. ಅಧ್ಯಕ್ಷತೆ ವಹಿಸಲಿದ್ದಾರೆ.
ಕನ್ನಡ ಮತ್ತು ಉರ್ದು ಕವಿಗೋಷ್ಠಿಯಲ್ಲಿ ಎ.ಎಸ್.ಮಕಾನದಾರ, ಡಾ. ಹಸೀನಾ ಖಾದ್ರಿ, ಶಿಲ್ಪಾಮ್ಯಾಗೇರಿ, ಮುಹಮ್ಮದ್ ಅರ್ಶದ್ ಹಿರೇಹಾಳ, ಮುರ್ತುಜಾ ಬೇಗಂ ಕೊಡಗಲಿ, ಅನ್ವರ್ ಅಹ್ಮದ್ ವಣಗೇರಿ, ಖಾಝಿ ಶಬ್ಬೀರ್ ಅಹ್ಮದ್, ಶಬ್ಬೀರ್ ಮನ್ಸೂರಿ ಕವನ ವಾಚಿಸಲಿದ್ದಾರೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಬಿ.ಎ. ಮುಹಮ್ಮದ್ ಅಲಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.