ಡಿ.29-30ರಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ದ.ಕ.ಜಿಲ್ಲಾ ಪ್ರವಾಸ
Update: 2025-12-09 19:27 IST
ಮಂಗಳೂರು,ಡಿ.9: ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ.ತಿಪ್ಪೇಸ್ವಾಮಿ ಕೆ.ಟಿ. ಡಿ.29 ಮತ್ತು 30ರಂದು ದ.ಕ.ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಡಿ.29ರಂದು ಪೂ.11ರಿಂದ ಆಯೋಗದ ವತಿಯಿಂದ ದ.ಕ.ಜಿಲ್ಲೆಯ ಗ್ರಾಮೀಣ ಮತ್ತು ನಗರ ಪುನರ್ವಸತಿ ಕಾರ್ಯಕರ್ತರಿಗೆ ಏರ್ಪಡಿಸಿರುವ ತರಬೇತಿ ಕಾರ್ಯಕ್ರಮ, ಮಧ್ಯಾಹ್ನ 2:30ಕ್ಕೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಅಧಿಕಾರಿಗಳೊಂದಿಗೆ (ಜಿಲ್ಲೆ ಹಾಗೂ ತಾಲೂಕು ಮಟ್ಟ) ಮಕ್ಕಳ ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ-2009’ರ ಅನುಷ್ಠಾನದ ಪ್ರಗತಿ ಪರಿಶೀಲನೆ ನಡೆಯಲಿದೆ.
ಡಿ.30ರಂದು ಪೂ.11ಕ್ಕೆ ಮಕ್ಕಳೊಂದಿಗೆ ಸಂವಾದ ಕಾರ್ಯಕ್ರಮ, ಮಧ್ಯಾಹ್ನ 2:30ಕ್ಕೆ ಕಾರ್ಮಿಕ ಇಲಾಖೆಯ ಅಧಿಕಾರಿಗಳೊಂದಿಗೆ ಮಕ್ಕಳು ಮತ್ತು ಹದಿಹರೆಯದವರ ಕಾರ್ಮಿಕ ಪದ್ಧತಿ ಕಾಯ್ದೆ -1986 ರ ಅನುಷ್ಠಾನದ ಪ್ರಗತಿ ಪರಿಶೀಲನೆ ನಡೆಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.