×
Ad

ದಿಲ್ಲಿ ಸ್ಪೋಟ ಪ್ರಕರಣ | ದ.ಕ. ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಮುಂಜಾಗ್ರತಾ ಕ್ರಮ : ಎಸ್ಪಿ

Update: 2025-11-11 22:44 IST

ಎಸ್ಪಿ ಡಾ.ಅರುಣ್ ಕೆ.

ಮಂಗಳೂರು, ನ.11: ಹೊಸದಿಲ್ಲಿಯಲ್ಲಿ ನಡೆದ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ದ.ಕ.ಜಿಲ್ಲಾ ಪೊಲೀಸ್ ಇಲಾಖಾ ವ್ಯಾಪ್ತಿಯಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ ಎಂದು ಎಸ್ಪಿ ಡಾ.ಅರುಣ್ ಕೆ. ತಿಳಿಸಿದ್ದಾರೆ.

ಜಿಲ್ಲಾದ್ಯಂತ ರಾತ್ರಿ ವೇಳೆ ಪೊಲೀಸ್ ಅಧಿಕಾರಿಗಳು ಕಟ್ಟುನಿಟ್ಟಾದ ಗಸ್ತು ನಿರ್ವಹಿಸುವಂತೆ ಸೂಚಿಸಲಾಗಿದೆ. ಸೂಕ್ಷ್ಮಪ್ರದೇಶಗಳಲ್ಲಿ ಅಧಿಕಾರಿ/ಸಿಬ್ಬಂದಿಗಳನ್ನು picketing point ಕರ್ತವ್ಯದಲ್ಲಿ ನಿಯೋಜಿಸಿ ನಿಗಾವಹಿಸಲಾಗುತ್ತಿದೆ. ಜಿಲ್ಲೆಯ ಮುಖ್ಯ ಸ್ಥಳಗಳಲ್ಲಿ ನಾಕಾಬಂದಿಗಳನ್ನು ಅಳವಡಿಸಿ ಕಟ್ಟುನಿಟ್ಟಾಗಿ ತಪಾಸಣೆ ನಡೆಸಲಾಗುತ್ತಿದೆ. ಜಿಲ್ಲೆಯ ಪ್ರವಾಸಿ ತಾಣಗಳು, ಧಾರ್ಮಿಕ ಸ್ಥಳಗಳು, ಪ್ರಮುಖ ಸರಕಾರಿ ಕಟ್ಟಡಗಳು ಸೇರಿದಂತೆ ಜನದಟ್ಟಣೆಯ ಇರುವ ಜಾಗಗಳಲ್ಲಿ ಹೆಚ್ಚಿನ ಭದ್ರತೆ ಒದಗಿಸಿ ನಿಗಾವಹಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಯಾವುದೇ ಸಂಶಯಾಸ್ಪದ ವ್ಯಕ್ತಿಗಳು ಅಥವಾ ಸಂಶಯಾಸ್ಪದ ಕೃತ್ಯಗಳು ಕಂಡುಬಂದಲ್ಲಿ ಸಾರ್ವಜನಿಕರು ತಕ್ಷಣ ಜಿಲ್ಲಾ ನಿಯಂತ್ರಣ ಕೊಠಡಿಗೆ ಮಾಹಿತಿ ನೀಡುವಂತೆ ಎಸ್ಪಿ ಮನವಿ ಮಾಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News