×
Ad

ದೇರಳಕಟ್ಟೆ: ಕಣಚೂರು ಆಸ್ಪತ್ರೆಗೆ ಹುಸಿ‌ ಬಾಂಬ್ ಬೆದರಿಕೆ ಕರೆ

Update: 2025-06-04 14:12 IST

ಕೊಣಾಜೆ: ದೇರಳಕಟ್ಟೆ ಸಮೀಪದ ಕಣಚೂರು‌ ಮೆಡಿಕಲ್ ಕಾಲೇಜಿಗೆ ಅನಾಮಿಕ ವ್ಯಕ್ತಿಯೊಬ್ಬ ಕರೆ ಮಾಡಿ ಬಾಂಬ್ ಬೆದರಿಕೆಯೊಡ್ಡಿದ ಘಟನೆ ಬುಧವಾರ ನಡೆದಿದ್ದು,‌ಬಳಿಕ ಬಾಂಬ್ ನಿಷ್ಕ್ರಿಯ ದಳ,‌ಪೊಲೀಸರು ತನಿಖೆ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ಬೆದರಿಕೆ ಕರೆಯ ಬಗ್ಗೆ ಆಸ್ಪತ್ರೆಯ ಆಡಳಿತಾಧಿಕಾರಿಗಳು ಪೊಲೀಸರಿಗೆ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಆಗಮಿಸಿದ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳ ಆಸ್ಪತ್ರೆ ಹಾಗೂ ಕಾಲೇಜನ್ನು ಪರಿಶೀಲಿಸಿ ಇದೊಂದು ಹುಸಿ ಬಾಂಬ್ ಕರೆ ಎಂದು ತಿಳಿಸಿದ್ದಾರೆ‌.

ಬುಧವಾರ ಬೆಳಿಗ್ಗೆ 8.15ರ ಹೊತ್ತಿಗೆ  ದೂರವಾಣಿ ಕರೆ ಬಂದಿದ್ದು. ಅದರಲ್ಲಿ ಬೆಳಿಗ್ಗೆ 11 ಗಂಟೆಗೆ ಬಾಂಬು ಬ್ಲಾಸ್ಟ್ ಮಾಡುವುದಾಗಿ ಹಾಗೂ ಎಲ್ಲರನ್ನು ಆಸ್ಪತ್ರೆ ಯಿಂದ ಹೊರಗೆ ಕಳುಹಿಸುವಂತೆ ಬೆದರಿಕೆ ಹಾಕಿದ್ದರು ಎನ್ನಲಾಗಿದೆ.

ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ಮೊಬೈಲ್ ನಂಬರ್ ಪರಿಶೀಲಿಸಿ ಆರೋಪಿಗಳ ಪತ್ತೆಗಾಗಿ ತನಿಖೆ ಮುಂದುವರಿಸಿದ್ದಾರೆ ಎಂದು ತಿಳಿದು ಬಂದಿದೆ.


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News