ವಿಕಸಿತ ಭಾರತ ಯುವ ಸಂಸತ್ ಸ್ಪರ್ಧೆ : ದ.ಕ. ಜಿಲ್ಲಾ ಮಟ್ಟದಲ್ಲಿ ನೋಂದಣಿ
ಮಂಗಳೂರು : ಕೇಂದ್ರ ಸರಕಾರದ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯದ ಪ್ರಮುಖ ವಿಕಸಿತ ಭಾರತ ಯುವ ಸಂಸತ್ - 2026 ಕಾರ್ಯಕ್ರಮ ಆರಂಭಗೊಂಡಿದೆ. 18ರಿಂದ 25 ವರ್ಷ ವಯಸ್ಸಿನ ಯುವಕ-ಯುವತಿಯರು ಹೆಸರು ನೋಂದಣಿ ಮಾಡಬಹುದು. ಈ ಸ್ಪರ್ಧೆಯಲ್ಲಿ ಭಾಗವಹಿಸುವವರು ಹಿಂದಿ, ಇಂಗ್ಲಿಷ್ ಅಥವಾ ಕನ್ನಡ ಭಾಷೆಯಲ್ಲಿ ನಿಗದಿತ ಸಮಯದೊಳಗೆ ತಮ್ಮ ಭಾಷಣವನ್ನು ಮಂಡಿಸಬಹುದು.
ಆಸಕ್ತ ಯುವಕ-ಯುವತಿಯರು ಅ.12ರೊಳಗೆ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯದ MY Bharat Portal (mybharat.gov.in) ಮೂಲಕ ಹೆಸರು ನೋಂದಾಯಿಸಿಕೊಳ್ಳಬಹುದು.
ದ.ಕ.ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಉತ್ತಮ ಪ್ರದರ್ಶನ ನೀಡುವ 10 ಜನ ಆಯ್ಕೆಯಾದವರು ಕರ್ನಾಟಕ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶ ಪಡೆಯುತ್ತಾರೆ. ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಉನ್ನತ ಸಾಧನೆ ಮಾಡುವ ಮೂವರು ಹೊಸದಿಲ್ಲಿಯ ಭಾರತೀಯ ಸಂಸತ್ತಿನಲ್ಲಿ ಆಯೋಜಿಸಲಾಗುವ ರಾಷ್ಟ್ರೀಯ ಮಟ್ಟದ ಕಾರ್ಯಕ್ರಮದಲ್ಲಿ ಭಾಗವಹಿಸುವ ಅವಕಾಶವನ್ನು ಪಡೆಯುತ್ತಾರೆ.
ಹೆಚ್ಚಿನ ಮಾಹಿತಿಗೆ ದೂ.ಸಂ: 9961332968/ 9448061961ನ್ನು ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.