ಧರ್ಮಸ್ಥಳ| ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ನೇತೃತ್ವದಲ್ಲಿ ಸೌಜನ್ಯ ತಾಯಿ ಕುಸುಮಾವತಿ ಜೊತೆ ಮಾತುಕತೆ
Update: 2025-09-01 18:30 IST
ಬೆಳ್ತಂಗಡಿ; ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಸೋಮವಾರ ಧರ್ಮಸ್ಥಳದಲ್ಲಿ ಅತ್ಯಾಚಾರಕ್ಕೆ ಈಡಾಗಿ ಕೊಲೆಯಾದ ಸೌಜನ್ಯ ಮನೆಗೆ ಭೇಟಿ ನೀಡಿ ತಾಯಿ ಕುಸುಮಾವತಿ ಅವರೊಂದಿಗೆ ಮಾತುಕತೆ ನಡೆಸಿದರು.
ಧರ್ಮಸ್ಥಳ ದಲ್ಲಿ ನಡೆದ ಸಮಾವೇಶದ ಬಳಿಕ ವಿಜಯೇಂದ್ರ ಅವರು ನೇರವಾಗಿ ಧರ್ಮಸ್ಥಳ ಗ್ರಾಮದ ಪಾಂಗಳದಲ್ಲಿರುವ ಸೌಜನ್ಯ ಮನೆಗೆ ತೆರಳಿದ್ದಾರೆ. ಅಲ್ಲಿ ಸೌಜನ್ಯ ತಾಯಿ ಕುಸುಮಾವತಿ ಅವರೊಂದಿಗೆ ಮಾತುಕತೆ ನಡೆಸಿದರು.
ಈ ವೇಳೆ ಕುಸುಮಾವತಿ ಅವರು ತಮ್ಮ ವಿರುದ್ಧ ನಡೆಯುತ್ತಿರುವ ಅಪಪ್ರಚಾರಗಳ ಬಗ್ಗೆ ವಿಜಯೇಂದ್ರ ಅವರ ಗಮನ ಸೆಳೆದರು. ಮಾಧ್ಯಮದವರ ಅನುಪಸ್ಥಿತಿಯಲ್ಲಿ ಕುಟುಂಬಸ್ಥರೊಂದಿಗೆ ವಿಜಯೇಂದ್ರ ಅವರು ಮಾತುಕತೆ ನಡೆಸಿದರು.
ಈ ಸಂದರ್ಭದಲ್ಲಿ ಸಂಸದ ಬ್ರಿಜೇಶ್ ಚೌಟ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಹಾಗು ಇತರರು ಇದ್ದರು.