ಧರ್ಮಸ್ಥಳ ಪ್ರಕರಣ : 3ನೇ ಗುರುತು ಮಾಡಿದ ಸ್ಥಳದಲ್ಲೂ ಸಿಗದ ಕಳೇಬರ
Update: 2025-07-30 15:30 IST
ಬೆಳ್ತಂಗಡಿ : ಧರ್ಮಸ್ಥಳದಲ್ಲಿ ಹಲವಾರು ಶವಗಳನ್ನು ಹೂಳಲಾಗಿದೆ ಎಂದು ಆರೋಪಿಸಲಾಗಿರುವ ಪ್ರಕರಣಕ್ಕೆ ಸಂಬಂಧಿಸಿ ಜುಲೈ 30 ರಂದು ಮಧ್ಯಾಹ್ನದ ವೇಳೆಗೆ 3ನೇ ಗುರುತು ಮಾಡಿದ ಸ್ಥಳದಲ್ಲಿ ಎಸ್.ಐ.ಟಿ ಅಧಿಕಾರಿಗಳ ಕಾರ್ಯಾಚರಣೆ ವೇಳೆ ಯಾವುದೇ ಕಳೇಬರಗಳು ಸಿಕ್ಕಿಲ್ಲ ಎನ್ನಲಾಗಿದೆ.
ಇದೇ ವೇಳೆ 4ನೇ ಗುರುತು ಮಾಡಿದ ಸ್ಥಳದಲ್ಲಿ ಕಾರ್ಯಾಚರಣೆ ಆರಂಭಿಸಿರುವುದಾಗಿ ತಿಳಿದು ಬಂದಿದೆ
ಇಂದು ಬೆಳಿಗ್ಗೆ ಎರಡನೇ ಗುರುತು ಮಾಡಿದ ಸ್ಥಳದಲ್ಲಿ 11:30 ರಿಂದ 2:30 ಯವರೆಗೆ ನಡೆದ ಸ್ಥಳ ಅಗೆಯುವಿಕೆ ವೇಳೆ ಎಸ್‌ಐಟಿ ಅಧಿಕಾರಿಗಳಿಗೆ ಯಾವುದೇ ಕುರುಹು ಸಿಕ್ಕಿಲ್ಲ ಎನ್ನಲಾಗಿದೆ.