×
Ad

ಧರ್ಮಸ್ಥಳ ಪ್ರಕರಣ: ಚಿನ್ನಯ್ಯನ ಜಾಮೀನು ಅರ್ಜಿ ವಿಚಾರಣೆ; ಸೆ.16ಕ್ಕೆ ಅದೇಶ ಕಾಯ್ದಿರಿಸಿದ ಬೆಳ್ತಂಗಡಿ ಕೋರ್ಟ್

Update: 2025-09-12 18:23 IST

ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿ ದೂರುದಾರನಾಗಿ ಬಂದು ಇದೀಗ ನ್ಯಾಯಾಂಗ ಬಂಧನದಲ್ಲಿರುವ ಸಾಕ್ಷಿ ದೂರುದಾರ ಚಿನ್ನಯ್ಯನ ಜಾಮೀನು ಅರ್ಜಿ ಬೆಳ್ತಂಗಡಿ ನ್ಯಾಯಾಲಯದಲ್ಲಿ ಸೆ.12 ರಂದು ವಿಚಾರಣೆಗೆ ಬಂದಿದ್ದು, ವಿಚಾರಣೆ ನಡೆಸಿದ ನ್ಯಾಯಾಲಯವು ತೀರ್ಪನ್ನು ಸೆ.16ಕ್ಕೆ ಕಾಯ್ದಿರಿಸಿದ್ದಾರೆ.

ಈ ನಡುವೆ ಎಸ್.ಐ.ಟಿ ಪೊಲೀಸರು ಜಾಮೀನು ನೀಡದಂತೆ ಕೋರ್ಟ್ ಗೆ ಆಕ್ಷೇಪಣೆ ಸಲ್ಲಿಸಿದ್ದರು. ಇಂದು ವಾದ ವಿವಾದ ನಡೆಸಿದ ಸರಕಾರಿ ವಕೀಲರು ಮತ್ತು ಚಿನ್ನಯ್ಯ ಪರ ಉಚಿತ ಕಾನೂನು ಸೇವಗಳ ಪ್ರಾಧಿಕಾರದ ವಕೀಲರು ವಾದ ಮಂಡಿಸಿದ್ದರು.

ಪ್ರಕರಣದ ವಿಚಾರಣೆ ಆಲಿಸಿದ ನ್ಯಾಯಾಧೀಶರು ಪ್ರಕರಣದ ಜಾಮೀನು ಅರ್ಜಿಯ ಅದೇಶವನ್ನು ಸೆ.16ಕ್ಕೆ ಕಾಯ್ದಿರಿಸಿದ್ದಾರೆ ಎಂದು ತಿಳಿದುಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News