ಧರ್ಮಸ್ಥಳ: ನೇತ್ರಾವತಿ ನದಿಯಲ್ಲಿ ಮೃತದೇಹ ಪತ್ತೆ
Update: 2025-07-22 18:56 IST
ಬೆಳ್ತಂಗಡಿ: ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟದ ಸಮೀಪ ಕೊಳೆತ ಸ್ಥಿತಿಯಲ್ಲಿ ಮೃತದೇಹವೊಂದು ರವಿವಾರ ಪತ್ತೆಯಾಗಿದೆ.
ಮೃತ ವ್ಯಕ್ತಿಯ ಗುರುತನ್ನು ಪೊಲೀಸರು ಪತ್ತೆ ಹಚ್ಚಿದ್ದು ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ನಿವಾಸಿ ಎಂದು ಗುರುತಿಸಲಾಗಿದೆ.
ಧರ್ಮಸ್ಥಳ ಗ್ರಾಮದ ನೇತ್ರಾವತಿ ಸ್ನಾನಘಟ್ಟದ ಸಮೀಪ ಅಪರಿಚಿತ ವ್ಯಕ್ತಿಯ ಮೃತದೇಹ ಇರುವುದಾಗಿ ಸ್ಥಳೀಯ ವ್ಯಕ್ತಿ ಬಿ ಪ್ರಮೋದ್ ಎಂಬವರು ಧರ್ಮಸ್ಥಳ ಪೊಲೀಸರಿಗೆ ಮಾಹಿತಿ ನೀಡಿದ್ದು ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದಾಗ ಸುಮಾರು 30ರಿಂದ 35 ವರ್ಷ ಪ್ರಾಯದ ಅಪರಿಚಿತ ಗಂಡಸಿನ ಮೃತದೇಹ ಕಂಡು ಬಂದಿದ್ದು ಪೊಲೀಸರು ಮೃತದೇಹವನ್ನು ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಈ ವ್ಯಕ್ತಿ ಆಕಸ್ಮಿಕವಾಗಿ ನದಿ ನೀರಿಗೆ ಬಿದ್ದು ಮೃತಪಟ್ಟಿರಬಹುದು ಅಥವಾ ಆತ್ಮಹತ್ಯೆ ಮಾಡಿಕೊಂಡಿರ ಬಹುದು ಎಂದು ಅನುಮಾನಿಸಿ ಧರ್ಮಸ್ಥಳ ಠಾಣೆಯಲ್ಲಿ 194 BNS 2023ರಂತೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.