ಧರ್ಮಸ್ಥಳ: ನೇತ್ರಾವತಿ ಕಾರ್ಯಾಚರಣೆ ಸ್ಥಳಕ್ಕೆ ಎಸ್.ಐ.ಟಿ ಮುಖ್ಯಸ್ಥ ಪ್ರಣಬ್ ಮೊಹಾಂತಿ ಭೇಟಿ
Update: 2025-07-30 17:29 IST
ಧರ್ಮಸ್ಥಳ: ಎಸ್.ಐ.ಟಿ ಕಾರ್ಯಾಚರಣೆ ನಡೆಯುತ್ತಿರುವ ನೇತ್ರಾವತಿ ಸ್ಥಳಕ್ಕೆ ಜು.30ರಂದು ಸಂಜೆ ಎಸ್.ಐ.ಟಿ ಮುಖ್ಯಸ್ಥ ಡಾ. ಪ್ರಣಬ್ ಮೊಹಾಂತಿ, ಐಪಿಎಸ್ ಅನುಚೇತ್, ಎಸ್ಪಿ ಸಿ.ಎ. ಸೈಮನ್ ಭೇಟಿ ನೀಡಿದ್ದಾರೆ.
ಗುರುತಿಸಿದ ನಾಲ್ಕನೇ ಜಾಗಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಧರ್ಮಸ್ಥಳದಲ್ಲಿ ಹಲವಾರು ಶವಗಳನ್ನು ಹೂಳಲಾಗಿದೆ ಎಂದು ಆರೋಪಿಸಲಾಗಿರುವ ಪ್ರಕರಣಕ್ಕೆ ಸಂಬಂಧಿಸಿ ಜುಲೈ 30ರಂದು ಮಧ್ಯಾಹ್ನದ ವೇಳೆಗೆ 3ನೇ ಗುರುತು ಮಾಡಿದ ಸ್ಥಳದಲ್ಲಿ ಎಸ್.ಐ.ಟಿ ಅಧಿಕಾರಿಗಳ ಕಾರ್ಯಾಚರಣೆ ವೇಳೆ ಯಾವುದೇ ಕಳೇಬರಗಳು ಸಿಕ್ಕಿಲ್ಲ ಎನ್ನಲಾಗಿದೆ.
ಇದೇ ವೇಳೆ 4ನೇ ಗುರುತು ಮಾಡಿದ ಸ್ಥಳದಲ್ಲಿ ಕಾರ್ಯಾಚರಣೆ ಆರಂಭಿಸಿರುವುದಾಗಿ ತಿಳಿದು ಬಂದಿದೆ.
ಇಂದು ಬೆಳಗ್ಗೆ ಎರಡನೇ ಗುರುತು ಮಾಡಿದ ಸ್ಥಳದಲ್ಲಿ 11:30 ರಿಂದ 2:30 ಯವರೆಗೆ ನಡೆದ ಸ್ಥಳ ಅಗೆಯುವಿಕೆ ವೇಳೆ ಎಸ್‌ಐಟಿ ಅಧಿಕಾರಿಗಳಿಗೆ ಯಾವುದೇ ಕುರುಹು ಸಿಕ್ಕಿಲ್ಲ ಎಂದು ತಿಳಿದುಬಂದಿದೆ.