×
Ad

ಧರ್ಮಸ್ಥಳ: ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾಣಿಸಿಕೊಂಡ ಕಾಡಾನೆ; ಸಾರ್ವಜನಿಕರಲ್ಲಿ ಆತಂಕ

Update: 2025-07-28 09:00 IST

ಬೆಳ್ತಂಗಡಿ; ಧರ್ಮಸ್ಥಳ ಗ್ರಾಮದ ಬೊಳಿಯಾರಿನಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಬೆಳಗ್ಗೆ ರಸ್ತೆಗೆ ಕಾಡಾನೆ ಬಂದಿದ್ದು ರಸ್ತೆಯಲ್ಲಿ ಬಸ್ ಕಾಯುತ್ತಿದ್ದ ಮಕ್ಕಳು ಸಾರ್ವಜನಿಕರು ಓಡಿ ತಪ್ಪಿಸಿಕೊಂಡಿದ್ದಾರೆ. ಯಾರಿಗೂ ಯಾವುದೇ ಅಪಾಯ ಸಂಭವಿಸಿಲ್ಲ. ಈ ವೇಳೆ ರಸ್ತೆಯಲ್ಲಿ ಯಾವುದೇ ವಾಹನವೂ ಓಡಾಡುತ್ತಿರಲಿಲ್ಲ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

ಕಳೆದ ಒಂದು ವಾರದಿಂದ ಇಲ್ಲಿ ಕಾಡಾನೆ ತಿರುಗಾಟ ನಡೆಸುತ್ತಿದ್ದು, ಜನರು ಭಯದಲ್ಲಿ ಬದುಕುತ್ತಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News