×
Ad

ಜಿಲ್ಲಾಮಟ್ಟದ ಪ.ಪೂ. ಕಾಲೇಜುಗಳ ಯೋಗಾಸನ ಸ್ಪರ್ಧೆ: ಆಳ್ವಾಸ್ ಬಾಲಕರಿಗೆ ಪ್ರಶಸ್ತಿ

Update: 2024-08-29 14:18 IST

ಮೂಡುಬಿದಿರೆ:  ಪದವಿ ಪೂರ್ವ ಶಿಕ್ಷಣ ಇಲಾಖೆ ಮಂಗಳೂರು ಹಾಗೂ ವಾಣಿ ಪದವಿ ಪೂರ್ವ ಕಾಲೇಜು, ಬೆಳ್ತಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ಆಗಸ್ಟ್‌ 28 ರಂದು ನಡೆದ ಜಿಲ್ಲಾಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಆಳ್ವಾಸ್ ಪ.ಪೂ ಕಾಲೇಜಿನ ಬಾಲಕರು ಸಮಗ್ರ ಪ್ರಶಸ್ತಿ ಗಳಿಸಿದ್ದಾರೆ.

ಮುಬಾರಕ್ ಹೆಚ್ ಎಂ ತೃತೀಯ ಸ್ಥಾನ, ವಿಜಯ ಎಂ ಎ ನಾಲ್ಕನೇ ಸ್ಥಾನ, ಬಸವರಾಜ ವಿ ಹೆಚ್ ಐದನೇ ಸ್ಥಾನ ಪಡೆದುಕೊಂಡಿದ್ದಾರೆ. ಕಲಾತ್ಮಕ ಸ್ಪರ್ಧೆಯಲ್ಲಿ: ಕುಮಾರ ಚೌಹಾನ್ ಪ್ರಥಮ ಸ್ಥಾನ, ತಾಳಬದ್ಧ ಸ್ಪರ್ಧೆಯಲ್ಲಿ: ರಾಜು ಎಲ್ ಕೆ ಪ್ರಥಮ ಸ್ಥಾನ ಪಡೆದುಕೊಂಡಿರುತ್ತಾರೆ.

ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಗೆ ಐದು ಕ್ರೀಡಾಪಟುಗಳು ಆಯ್ಕೆಯಾಗಿರುತ್ತಾರೆ. ವಿಜೇತ ಕ್ರೀಡಾಪಟುಗಳಿಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ  ಡಾ. ಎಂ. ಮೋಹನ ಆಳ್ವರವರು ಅಭಿನಂದನೆ ಸಲ್ಲಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News