ಮುಹಮ್ಮದ್ ಮಸೂದ್‌ರನ್ನು ಭೇಟಿ ಮಾಡಿದ ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್
Update: 2025-05-31 13:16 IST
ಮಂಗಳೂರು: ದ.ಕ. ಮತ್ತು ಉಡುಪಿ ಜಿಲ್ಲಾ ದಿ ಮುಸ್ಲಿಂ ಸೆಂಟ್ರಲ್ ಕಮಿಟಿಯ ಅಧ್ಯಕ್ಷರಾದ ಅಲ್ ಹಾಜ್ ಕೆ ಎಸ್ ಮುಹಮ್ಮದ್ ಮಸೂದ್ ರವರ ನಿವಾಸಕ್ಕೆ ದ.ಕ ಜಿಲ್ಲಾ ಉಸ್ತುವಾರಿ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರು ಶನಿವಾರ ಭೇಟಿ ನೀಡಿದರು.
ಈ ವೇಳೆ ದಕ್ಷಿಣ ಕನ್ನಡ ಜಿಲ್ಲೆಯ ಪ್ರಸ್ತುತ ಸನ್ನಿವೇಶದ ಬಗ್ಗೆ ಮಾತುಕತೆ ನಡೆಸಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರುಗಳಾದ ಮಂಜುನಾಥ ಭಂಡಾರಿ, ಐವನ್ ಡಿಸೋಜಾ, ಕಾಂಗ್ರೆಸ್ ಮುಖಂಡರುಗಳಾದ ಪದ್ಮರಾಜ್ ಪೂಜಾರಿ, ಮಮತಾ ಗಟ್ಟಿ, ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷರಾದ ಮೊಹಮ್ಮದ್ ಮೋನು, ಮುಸ್ಲಿಂ ಸೆಂಟ್ರಲ್ ಕಮಿಟಿಯ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಹನೀಫ್ , ಕಾರ್ಯದರ್ಶಿಗಳಾದ ಹಾಜಿ ಬಿ. ಅಬೂಬಕ್ಕರ್, ಡಾ. ಮೊಹಮ್ಮದ್ ಆರಿಫ್ ಮಸೂದ್, ಎನ್.ಕೆ. ಅಬೂಬಕ್ಕರ್, ಆಬಿದ್ ಜಲಿಹಾಲ್, ಹಾಜಿ ಮಕ್ಬೂಲ್ ಅಹಮದ್, ಮಾಜಿ ಕಾರ್ಪೊರೇಟರ್ ಶಂಸುದ್ದೀನ್ ಕುದ್ರೋಳಿ ಮೊದಲಾದವರು ಉಪಸ್ಥಿತರಿದ್ದರು.