×
Ad

ದ.ಕ. ಜಿಲ್ಲಾ ಮಟ್ಟದ ರಾಜ್ಯ ಸರಕಾರಿ ನೌಕರರ ಕ್ರೀಡಾಕೂಟ ಮುಂದೂಡಿಕೆ

Update: 2026-01-08 21:35 IST

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತುಕ್ರೀಡಾ ಇಲಾಖೆ ಹಾಗೂ ರಾಜ್ಯ ಸರಕಾರಿ ನೌಕರರ ಸಂಘ, ದಕ್ಷಿಣ ಕನ್ನಡ ಜಿಲ್ಲೆಯ ಸಹಯೋಗದೊಂದಿಗೆ ಜನವರಿ 13 ಮತ್ತು 14 ರಂದು ನಿಗದಿಪಡಿಸಲಾಗಿದ್ದ 2025- 26ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ರಾಜ್ಯ ಸರಕಾರಿ ನೌಕರರ ಕ್ರೀಡಾಕೂಟವನ್ನು ಕಾರಣಾಂತರದಿಂದ ಮುಂದೂಡಲಾಗಿದೆ.

ಕ್ರೀಡಾಕೂಟವನ್ನು ಜ. 22 ರಂದು ಬೆಳಗ್ಗೆ 9 ಗಂಟೆಗೆ ಮಂಗಳೂರು ನಗರದ ಮಂಗಳಾ ಕ್ರೀಡಾಂಗಣದಲ್ಲಿ ಹಾಗೂ ಸಾಂಸ್ಕತಿಕ ಸ್ಪರ್ಧೆಗಳನ್ನು ಜ. 23 ರಂದು ಬೆಳಗ್ಗೆ 9 ಗಂಟೆಗೆ ನಗರದ ಸರಕಾರಿ ನೌಕರರ ಸಭಾ ಭವನದಲ್ಲಿ ಆಯೋಜಿಸಲಾಗುತ್ತದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News