×
Ad

ದ.ಕ. ಜಿಲ್ಲೆಯಲ್ಲಿ 25,045 ಯುವ ಮತದಾರರ ಸೇರ್ಪಡೆ

Update: 2023-12-06 20:55 IST

ಸಾಂದರ್ಭಿಕ ಚಿತ್ರ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತದಾರರ ನೋಂದಣಿ ಅಭಿಯಾನ ನಡೆಯುತ್ತಿದ್ದು 18 ವರ್ಷ ತುಂಬಿದ 25,045 ಮತದಾರರು ಹೊಸದಾಗಿ ನೋಂದಣಿಯಾಗಿದ್ದಾರೆ.

ಜಿಲ್ಲೆಯಲ್ಲಿ ದಾಖಲೆಗಳ ಪ್ರಕಾರ 18 ವರ್ಷ ತುಂಬಿದ 45,530 ಯುವಜನರು ಇದ್ದಾರೆ. ಈ ಪೈಕಿ 25,045 ಜನ ಮಾತ್ರ ಮತದಾರರ ಪಟ್ಟಿಗೆ ಹೆಸರು ನೋಂದಾಯಿಸಿದ್ದಾರೆ, ಇನ್ನು 20,494 ಮಂದಿ ಬಾಕಿ ಇದ್ದು ಇವರನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ಜಿಲ್ಲಾಡಳಿತ ಪ್ರಯತ್ನ ನಡೆಸುತ್ತಿದೆ ಎಂದು ಮುಲ್ಲೈ ಮುಗಿಲನ್ ತಿಳಿಸಿದ್ದಾರೆ.

ಯುವ ಮತದಾರರಲ್ಲಿ 3742 ಮಂದಿಯ ಫಾರ್ಮ್-6 ಅರ್ಜಿಗಳು ವಿಲೇವಾರಿಗೆ ಬಾಕಿ ಇದೆ. ಶೀಘ್ರದಲ್ಲಿ ಈ ಪ್ರಕ್ರಿಯೆ ಮುಗಿಸಿ ಅರ್ಹರನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲಾಗುವುದು. ಚುನಾವಣಾ ಆಯೋಗವು ಪ್ರಸ್ತುತ ಪ್ರತಿ ವರ್ಷ ನಾಲ್ಕು ಅರ್ಹತಾ ದಿನಾಂಕವನ್ನು ಮತದಾರರು ಪಟ್ಟಿಗೆ ಹೆಸರು ಸೇರಿಸಲು ನಿಗದಿಪಡಿಸಿದೆ. ಪ್ರತಿ ವರ್ಷ ಜನವರಿ, ಎಪ್ರಿಲ್, ಜುಲೈ ಮತ್ತು ಅಕ್ಟೋಬರ್ ತಿಂಗಳ 1ನೇ ತಾರೀಕು 18 ವರ್ಷ ಪೂರ್ತಿಗೊಂಡವರು ಮತದಾರರ ಪಟ್ಟಿಗೆ ಹೆಸರು ಸೇರಿಸಲು ಅವಕಾಶ ನೀಡಲಾಗಿದೆ.

ಪ್ರಸ್ತುತ ಸಾಲಿನಲ್ಲಿ ಯುವ ಮತದಾರರು ಹೆಸರು ಸೇರ್ಪಡೆಗೆ ಡಿಸೆಂಬರ್ 9 ಕೊನೆಯ ದಿನಾಂಕವಾಗಿದೆ. ಮತದಾರರು ಮೊಬೈಲ್ ಆ್ಯಪ್ VOTER HELP LINE ನ್ನುಗೂಗಲ್ ಪ್ಲೇ ಸ್ಟೋರ್‌ನಿಂದ ಡೌನ್ ಲೋಡ್ ಮಾಡಿ ಫಾರ್ಮ್-6 ಸಲ್ಲಿಸಬಹುದು. ಮತದಾರರು ವೆಬ್ ಸೈಟ್ voters.eci.gov.in ಇದರಲ್ಲಿಯೂ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಅರ್ಜಿ ಸಲ್ಲಿಸಬಹುದು ಅಥವಾ ತಮ್ಮ ಮತಗಟ್ಟೆಯ ಬೂತ್ ಮಟ್ಟದ ಅಧಿಕಾರಿಯವರಿಗೆ ಫಾರಂ-6 ಅರ್ಜಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಗೆ ಹೆಸರು ಸೇರಿಸಬಹುದು ಎಂದು ಮುಲ್ಲೈ ಮುಗಿಲನ್ ತಿಳಿಸಿದ್ದಾರೆ.

ಹೊಸದಾಗಿ ಸೇರ್ಪಡೆಯಾದ ಯುವ ಮತದಾರರ ವಿವರ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ - 3471, ಮೂಡಬಿದ್ರೆ -2707, ಮಂಗಳೂರು ನಗರ ಉತ್ತರ - 3235, ಮಂಗಳೂರು ನಗರ ದಕ್ಷಿಣ - 2635, ಮಂಗಳೂರು - 3171, ಬಂಟ್ವಾಳ - 3502, ಪುತ್ತೂರು- 3187, ಸುಳ್ಯ - 3137.

ಯುವ ಮತದಾರರು ಈ ಅವಕಾಶವನ್ನು ಬಳಸಿಕೊಂಡು ಮತದಾರರ ಪಟ್ಟಿಗೆ ಹೆಸರು ಸೇರಿಸಬೇಕು ಎಂದು ಜಿಲ್ಲಾ ಚುನಾವಣಾ ಅಧಿಕಾರಿಯಾಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News