×
Ad

ಮೇ 11ರಂದು ದ.ಕ ಗ್ಯಾರೇಜ್ ಮಾಲಕರ ಸಂಘದ ಕ್ರೀಡೋತ್ಸವ

Update: 2025-05-10 12:46 IST

ಮಂಗಳೂರು : ದ.ಕ ಗ್ಯಾರೇಜ್ ಮಾಲಕರ ಸಂಘದ ‘ಕ್ರೀಡೋತ್ಸವ-2025’ ಮತ್ತು ಗ್ಯಾರೇಜ್ ಕಾರ್ಮಿಕರ ಕುಟುಂಬ ಸಮ್ಮಿಲನ ಮೇ 11ರಂದು ನಗರದ ಮಂಗಳಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.

ನೆಹರು ಯುವಕೇಂದ್ರ ಮಂಗಳೂರು ಹಾಗೂ ಜಿ.ಎಂ ಸ್ಪೋರ್ಟ್ಸ್ ಕ್ಲಬ್ ನ ಸಹಭಾಗಿತ್ವದಲ್ಲಿ ನಡೆಯಲಿರುವ ಈ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ವಿಧಾನ ಸಭಾಧ್ಯಕ್ಷ ಯು.ಟಿ ಖಾದರ್, ಕಾರ್ಮಿಕ ಸಚಿವ ಸಂತೋಷ್ ಲಾಡ್, ಸಂಸದ ಕ್ಯಾ.ಬ್ರಿಜೇಶ್ ಚೌಟ, ಶಾಸಕ ಡಿ.ವೇದವ್ಯಾಸ ಕಾಮತ್ ಮತ್ತಿತರ ಗಣ್ಯರು ಪಾಲ್ಗೊಳ್ಳಲಿರುವರು ಎಂದು ಪ್ರಕಟನೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News