×
Ad

ದ.ಕ: ಕಾಂಗ್ರೆಸ್ ಚುನಾವಣಾ ಕಚೇರಿ ಉದ್ಘಾಟನೆ

Update: 2024-03-26 12:41 IST

ಮಂಗಳೂರು, ಮಾ.26: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಅವರ ಚುನಾವಣಾ ಕಚೇರಿಯನ್ನು ಮಂಗಳೂರು ಲಾಲ್‌ಬಾಗ್‌ನಲ್ಲಿ ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ ಉದ್ಘಾಟಿಸಿದರು.

ಈ ಸಂದರ್ಭ ಜನಾರ್ದನ ಪೂಜಾರಿ ಅವರು ಅಭ್ಯರ್ಥಿ ಪದ್ಮರಾಜ್ ಆರ್. ಅವರಿಗೆ ಶುಭ ಹಾರೈಸಿದರು.

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ, ದ.ಕ. ಜಿಲ್ಲಾ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಬಿ. ರಮಾನಾಥ ರೈ, ಕೆಪಿಸಿಸಿ ಉಪಾಧ್ಯಕ್ಷ ಐವನ್ ಡಿಸೋಜ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ, ವಕ್ತಾರೆ ಪ್ರತಿಭಾ ಕುಳಾಯಿ, ಅಭಯಚಂದ್ರ ಜೈನ್, ಮಾಜಿ ಶಾಸಕರಾದ ಜೆ.ಆರ್. ಲೋಬೊ, ಶಕುಂತಳಾ ಶೆಟ್ಟಿ, ವಿಜಯ ಕುಮಾರ್ ಶೆಟ್ಟಿ, ರಾಜ್ಯಸಭಾ ಮಾಜಿ ಸದಸ್ಯ ಬಿ. ಇಬ್ರಾಹಿಂ, ಮನಪಾ ಪ್ರತಿಪಕ್ಷ ನಾಯಕ ಪ್ರವೀಣ್ ಚಂದ್ರ ಆಳ್ವ, ಜಿಲ್ಲಾ ಕಾಂಗ್ರೆಸ್ ಮತ್ತು ಮಹಿಳಾ ಕಾಂಗ್ರೆಸ್ ಪದಾಧಿಕಾರಿಗಳು, ಕಾರ್ಪೊರೇಟರ್ ಗಳು, ಬ್ಲಾಕ್ ಕಾಂಗ್ರೆಸ್, ಎನ್‌ಎಸ್‌ಯುಐ, ಸೇವಾದಳ ಸೇರಿದಂತೆ ನಾನಾ ಘಟಕಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಕುದ್ರೋಳಿ ಗೋಕರ್ಣನಾಥ ದೇವಸ್ಥಾನದ ಮುಂಭಾಗದಿಂದ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಲಾಯಿತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News