×
Ad

ದ.ಕ. ಜಿಲ್ಲಾ ಕಾಂಗ್ರೆಸ್ ನಿಂದ ಇಂದಿರಾ ಗಾಂಧಿ ಜನ್ಮ ದಿನಾಚರಣೆ

Update: 2023-11-19 14:28 IST

ಮಂಗಳೂರು, ನ.19: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಬ್ಯಾಂಕುಗಳ ರಾಷ್ಟ್ರೀಕರಣ, ಭೂ ಮಸೂದೆ ಕಾಯ್ದೆ ಹಾಗೂ ಹಲವು ಕ್ರಾಂತಿಕಾರಕ ಯೋಜನೆಗಳನ್ನು ಜಾರಿಗೆ ತಂದು ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಕಾರಣರಾಗಿದ್ದಾರೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.

ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ರವಿವಾರ ನಡೆದ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.

ಇಂದಿರಾ ಗಾಂಧಿ ದೇಶದ ಏಕತೆಗಾಗಿ ಬಲಿದಾನಗೈದ ಧೀಮಂತ ಮಹಿಳೆ. ದೇಶದಲ್ಲಿ ತುರ್ತು ಪರಿಸ್ಥಿತಿ ಜಾರಿಗೊಳಿಗೊಳಿಸಬೇಕಾದ ಅನಿವಾರ್ಯ ಎದುರಾದುದರಿಂದ ಬಡವರಿಗೆ ಅನುಕೂಲವಾಗಿದೆ ಹೊರತು ಅನಾನುಕೂಲವಾಗಿಲ್ಲ. ಬಡತನ ನಿರ್ಮೂಲನೆ ಕಾರ್ಯಕ್ರಮದ ಮೂಲಕ ಜನರು ಆರ್ಥಿಕವಾಗಿ ಮೇಲಕ್ಕೆತ್ತುವ ಕೆಲಸವನ್ನು ಅವರು ಮಾಡಿದ್ದರು. ಸಾಮಾಜಿಕ ನ್ಯಾಯದಿಂದ ವಂಚಿತರಾದ ದುರ್ಬಲ ವರ್ಗದ ಜನರಿಗೆ ಸ್ವಾಭಿಮಾನದ ಬದುಕನ್ನು ಕೂಡ ಅವರು ಕಲ್ಪಿಸಿದ್ದರು. ಅವರ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ 20 ಅಂಶಗಳ ಆರ್ಥಿಕ ಕಾರ್ಯಕ್ರಮಗಳ ಹೆಚ್ಚಿನ ಫಲಾನುಭವಿಗಳು ದ.ಕ. ಜಿಲ್ಲೆಯಲ್ಲಿದ್ದಾರೆ ಎಂದು ರಮಾನಾಥ ರೈ ನೆನಪಿಸಿದರು.

ರಾಜ್ಯಸಭಾ ಮಾಜಿ ಸದಸ್ಯ ಬಿ.ಇಬ್ರಾಹಿಂ, ವಿಧಾನ ಪರಿಷತ್ ಮಾಜಿ ಸದಸ್ಯ ಐವನ್ ಡಿಸೋಜ ಮಾತನಾಡಿದರು.

ಪಕ್ಷದ ಮುಖಂಡರಾದ ಆರ್.ಪದ್ಮರಾಜ್, ಸಂತೋಷ್ ಕುಮಾರ್ ಶೆಟ್ಟಿ, ಲುಕ್ಮಾನ್ ಬಂಟ್ವಾಳ್, ಜೆ.ಅಬ್ದುಲ್ ಸಲೀಂ, ಪ್ರಕಾಶ್ ಸಾಲ್ಯಾನ್, ವಿಶ್ವಾಸ್ ದಾಸ್, ಬಿ.ಎಂ. ಅಬ್ಬಾಸ್ ಅಲಿ, ನೀರಜ್ ಚಂದ್ರಪಾಲ್, ಕೆ.ಹರಿನಾಥ್, ಶುಭೋದಯ ಆಳ್ವ, ಮಂಜುಳಾ ನಾಯಕ್, ಚೇತನ್ ಬೆಂಗ್ರೆ, ಮುಹಮ್ಮದ್ ಕುಂಜತ್ತಬೈಲ್, ಟಿ.ಕೆ.ಸುಧೀರ್, ವಿಕಾಸ್ ಶೆಟ್ಟಿ, ಶಂಸುದ್ದೀನ್ ಬಂದರ್, ಲಕ್ಷ್ಮಿ ನಾಯರ್, ಪದ್ಮನಾಭ ಅಮೀನ್, ಹೈದರ್ ಬೋಳಾರ್, ದಿನೇಶ್ ಕುಂಪಲ, ಗಿರೀಶ್ ಶೆಟ್ಟಿ, ಚೇತನ್ ಕುಮಾರ್, ಆಸಿಫ್ ಬೆಂಗ್ರೆ, ವೆಂಕಪ್ಪ ಪೂಜಾರಿ, ಸೌಹಾನ್ ಎಸ್.ಕೆ., ಭಾಸ್ಕರ್ ರಾವ್, ಯೋಗೀಶ್ ನಾಯಕ್, ದಿನೇಶ್ ಪಾಂಡೇಶ್ವರ, ರಫೀಕ್ ಕಣ್ಣೂರ್, ನೀತ್ ಶರಣ್, ಸಲೀಂ ಕುದ್ರೋಳಿ ಉಪಸ್ಥಿತರಿದ್ದರು.

ಮಾಜಿ ಮೇಯರ್ ಶಶಿಧರ್ ಹೆಗ್ಡೆ ಸ್ವಾಗತಿಸಿದರು. ಸೇವಾ ದಳ ಜಿಲ್ಲಾ ಮುಖ್ಯಸ್ಥ ಜೋಕಿಂ ಡಿಸೋಜ ವಂದಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News