×
Ad

ದಕ್ಷಿಣ ರಾಜ್ಯಗಳ ಲೋಕಸಭಾ ಕ್ಷೇತ್ರಗಳನ್ನು ಕುಗ್ಗಿಸಲು ಕೇಂದ್ರ ಮುಂದಾಗಿದೆ : ಡಿ.ಕೆ. ಶಿವಕುಮಾರ್

Update: 2025-03-02 15:08 IST

ಡಿ.ಕೆ.ಶಿವಕುಮಾರ್

ಮಂಗಳೂರು : "ಸಂಸತ್ತಿನಲ್ಲಿ ದಕ್ಷಿಣ ರಾಜ್ಯಗಳ ಸಂಖ್ಯಾಬಲವನ್ನು ಕಡಿಮೆ ಮಾಡಲು ಕೇಂದ್ರ ಬಿಜೆಪಿ ಸರಕಾರ ಮುಂದಾಗಿದ್ದು, ಕಾಂಗ್ರೆಸ್ ಇದರ ವಿರುದ್ಧ ಹೋರಾಟ ಮಾಡಲಿದೆ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.

ಮಂಗಳೂರು ವಿಮಾನ ನಿಲ್ದಾಣದ ಬಳಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ರವಿವಾರ ಪ್ರತಿಕ್ರಿಯಿಸಿದರು.

ಕೇಂದ್ರ ಸರಕಾರ ಕ್ಷೇತ್ರ ಪುನರ್ ವಿಂಗಡಣೆ ಮಾಡಲು ಮುಂದಾಗಿರುವ ಬಗ್ಗೆ ಕೇಳಿದಾಗ, "ಕೇಂದ್ರ ಸರಕಾರ ಸಂಸತ್ ಕ್ಷೇತ್ರಗಳ ಪುನರ್ ವಿಂಗಡಣೆ ಮಾಡಲು ಮುಂದಾಗಿರುವುದನ್ನು ಕಾಂಗ್ರೆಸ್ ಪಕ್ಷ ವಿರೋಧಿಸುತ್ತದೆ. ಇದು ಸರಿಯಲ್ಲ. ಇದರ ವಿರುದ್ಧ ಚುನಾವಣಾ ಆಯೋಗ, ನ್ಯಾಯಾಲಯಗಳ ಮೂಲಕ ನಾವು ಹೋರಾಟ ಮಾಡುತ್ತೇವೆ" ಎಂದು ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News