×
Ad

ಡಾ. ಅಬ್ದುಲ್ ಕಲಾಂ ವಸತಿ ಹಾಗೂ ಮುಸ್ಲಿಂ ವಸತಿ ಶಾಲೆಗಳಿಗೆ ಸೇರ್ಪಡೆ: ಅರ್ಜಿ ಆಹ್ವಾನ

Update: 2026-01-22 20:13 IST

ಮಂಗಳೂರು, ಜ.22: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ, ಪಾರ್ಸಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ದ.ಕ. ಜಿಲ್ಲೆಯ ಡಾ. ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ ಹಾಗೂ ಸರಕಾರಿ ಮುಸ್ಲಿಂ ವಸತಿ ಶಾಲೆಗಳಿಗೆ 2026-27ನೇ ಸಾಲಿನಲ್ಲಿ 6ನೇ ತರಗತಿಗೆ ಉಚಿತ ಪ್ರವೇಶಕ್ಕಾಗಿ ಸೇವಾ ಸಿಂಧು ಪೋರ್ಟಲ್ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಸೇವಾಸಿಂಧು ಪೋರ್ಟಲ್‌ನಲ್ಲಿ ಅರ್ಜಿಗಳನ್ನು ಫೆ.10ರೊಳಗೆ https://sevasindhuservices.karnataka.gov.in| ಸಲ್ಲಿಸಬಹುದು ಅಥವಾ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಲ್ಲಿ ಉಚಿತವಾಗಿ ಸಲ್ಲಿಸಬಹುದಾಗಿದೆ.

ಉಳ್ಳಾಲ ತಾಲೂಕಿನ ಅಸೈಗೋಳಿಯಯಲ್ಲಿರುವ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ (ಆಂಗ್ಲ ಮಾಧ್ಯಮ-ಸಿಬಿಎಸ್‌ಇ) ಮತ್ತು ಉಳ್ಳಾಲ ತಾಲೂಕಿನ ಅಸೈ ಮದಕದ ಸರಕಾರಿ ಮುಸ್ಲಿಂ ವಸತಿ ಶಾಲೆ (ಆಂಗ್ಲ ಮಾಧ್ಯಮ-ರಾಜ್ಯ) ಗಳಾಗಿವೆ.

ಹೆಚ್ಚಿನ ಮಾಹಿತಿಗೆ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಮಂಗಳೂರು (08242433078), ಬಂಟ್ವಾಳ (08255232470), ಬೆಳ್ತಂಗಡಿ (0826295335), ಪುತ್ತೂರು (08251237078), ಸುಳ್ಯ (08257230666) ಅಥವಾ ಇಲಾಖೆಯ ವೆಬ್‌ಸೈಟ್ https://dom.karnataka.gov.in ಸಹಾಯವಾಣಿ: 8277799990ಗೆ ಸಂಪರ್ಕಿಸಬಹುದು ಎಂದು ಇಲಾಖೆಯ ದ.ಕ.ಜಿಲ್ಲಾ ಅಧಿಕಾರಿಪ್ರಕಟನೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News