×
Ad

ಬ್ಯಾರಿ ಜನಾಂಗ ಪ್ರಾಚೀನ ಕಾಲದಿಂದಲೂ ನೆಚ್ಚಿಕೊಂಡು ಬಂದಿರುವ ಸಾಂಸ್ಕೃತಿಕ ಕಲೆಯಾಗಿದೆ ದಫ್: ಲತೀಫ್ ನೇರಳಕಟ್ಟೆ

Update: 2025-12-19 21:23 IST

ವಿಟ್ಲ : ಬ್ಯಾರಿ ಜನಾಂಗ ಪ್ರಾಚೀನ ಕಾಲದಿಂದಲೂ ನೆಚ್ಚಿಕೊಂಡು ಬಂದಿರುವ ಸಾಂಸ್ಕೃತಿಕ ಕಲೆಯಾಗಿದೆ ದಫ್ ಕಲೆ ಎಂದು ದ.ಕ.ಮತ್ತು ಉಡುಪಿ ಜಿಲ್ಲಾ ದಫ್ ಅಸೋಸಿಯೇಷನ್ ಅಧ್ಯಕ್ಷ, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯ ಲತೀಫ್ ನೇರಳಕಟ್ಟೆ ಅಭಿಪ್ರಾಯಪಟ್ಟರು.

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ವತಿಯಿಂದ ವಿಟ್ಲ ಸಮೀಪದ ಒಕ್ಕೆತ್ತೂರು ನೂರುಲ್ ಹುದಾ ಸಮುದಾಯ ಭವನದಲ್ಲಿ ಗುರುವಾರ ನಡೆದ ಬಂಟ್ವಾಳ ತಾಲೂಕು ಮಟ್ಟದ ದಫ್ ಸ್ಪರ್ದಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಒಂದು ಜನಾಂಗದ ಅಳಿವು - ಉಳಿವು ಅವರ ಭಾಷೆ , ಸಾಹಿತ್ಯ, ಸಂಸ್ಕೃತಿಯ ಬಳಕೆಯನ್ನು ಅವಲಂಬಿಸಿರುತ್ತದೆ ಎಂದರು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಒಕ್ಕೆತ್ತೂರು ಬದ್ರಿಯಾ ಜುಮಾ ಮಸೀದಿ ಖತೀಬ್ ಮಹಮ್ಮದ್ ರಫೀಕ್ ಅಹ್ಸನಿ ಮಾತನಾಡಿ, ದಫ್ ಕಲೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಬ್ಯಾರಿ ಅಕಾಡೆಮಿ ಹಮ್ಮಿಕೊಂಡಿರುವ ಇಂತಹ ದಫ್ ಸ್ಪರ್ದಾ ಕಾರ್ಯಕ್ರಮಗಳು ಶ್ಲಾಘನೀಯ, ಅಕಾಡೆಮಿ ಅಧ್ಯಕ್ಷ ಉಮರ್ ಯು.ಎಚ್ ಅವರ ನೇತೃತ್ವದಲ್ಲಿ ಇಂತಹ ಕಾರ್ಯಕ್ರಮಗಳು ರಾಜ್ಯದೆಲ್ಲೆಡೆ ಪಸರಿಸಲಿ ಎಂದು ಹಾರೈಸಿದರು.

ಕಾರ್ಯಕ್ರಮಕ್ಕೂ ಮುನ್ನ ಭಾಗವಹಿಸಿದ್ದ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಉಮರ್ ಯು.ಎಚ್. ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ಮಾಹಿತಿ ನೀಡಿದರು.

ಹಿರಿಯ ದಫ್ ತರಬೇತುದಾರ ಬಿ.ಎಂ.ಹಸೈನಾರ್ ಕಡಂಬು, ಸಾಮಾಜಿಕ ಮುಂದಾಳು ಅಬ್ದುಲ್ ಕರೀಮ್ ಕುದ್ದುಪದವು ಶುಭ ಹಾರೈಸಿದರು.

ಒಕ್ಕೆತ್ತೂರು ಬದ್ರಿಯಾ ಜುಮಾ ಮಸೀದಿ ಅಧ್ಯಕ್ಷ ವಿ.ಎಂ.ಅಶ್ರಫ್, ಕಾರ್ಯದರ್ಶಿ ಇಕ್ಬಾಲ್ ಮೇಗಿನಪೇಟೆ, ಪ್ರಮುಖರಾದ ವಿ.ಎಸ್,ಇಬ್ರಾಹಿಂ ಒಕ್ಕೆತ್ತೂರು, ಹಸೈನಾರ್ ಹಾಜಿ ಪೈಲ್ವಾನ್, ಒಕ್ಕೆತ್ತೂರು ಶಾಲಾ ಎಸ್ಡಿಎಂಸಿ ಅಧ್ಯಕ್ಷ ಸಿ.ಎಚ್. ಹಾರಿಸ್ ಅತಿಥಿಗಳಾಗಿ ಭಾಗವಹಿಸಿದ್ದರು.

ಬಂಟ್ವಾಳ ತಾಲೂಕು ಮಟ್ಟದ ದಫ್ ಸ್ಪರ್ಧೆಯಲ್ಲಿ ರಿಫಾಯಿಯ್ಯ ದಫ್ ಸಂಘ ಕಡಂಬು ಪ್ರಥಮ ಹಾಗೂ ಒಕ್ಕೆತ್ತೂರು ದಫ್ ತಂಡ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸುವ ಅವಕಾಶ ಪಡೆದುಕೊಂಡಿತು.

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಸದಸ್ಯ, ಕಾರ್ಯಕ್ರಮದ ಸಂಚಾಲಕ ಅಬೂಬಕರ್ ಅನಿಲಕಟ್ಟೆ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಅಕಾಡಮಿ ಸಿಬಂಧಿ ವಿಜಯ್ ವಂದಿಸಿದರು.







 


 


 


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News