×
Ad

ಉಳ್ಳಾಲ ಸಯ್ಯಿದ್ ಮದನಿ ಚಾರಿಟೇಬಲ್ ಟ್ರಸ್ಟ್ ಮತ್ತು ಅರಬಿಕ್ ಎಜುಕೇಶನಲ್ ಟ್ರಸ್ಟ್ ಪದಾಧಿಕಾರಿಗಳ ಆಯ್ಕೆ

Update: 2023-11-19 21:33 IST

ಉಳ್ಳಾಲ : ಸಯ್ಯಿದ್ ಮದನಿ ದರ್ಗಾ ಸಮಿತಿ ಇದರ ಅಂಗ ಸಂಸ್ಥೆಯಾದ ಸಯ್ಯಿದ್ ಮದನಿ ಅರಬಿಕ್ ಎಜುಕೇಶನಲ್ ಟ್ರಸ್ಟ್(ರಿ) ಮತ್ತು ಸಯ್ಯಿದ್ ಮದನಿ ಚಾರಿಟೇಬಲ್ ಟ್ರಸ್ಟ್ (ರಿ) ಇದರ ಪದಾಧಿಕಾರಿಗಳ ಆಯ್ಕೆಯು ಉಳ್ಳಾಲ ಖಾಝಿ ಸಯ್ಯಿದ್ ಫಝಲ್ ಕೋಯಮ್ಮ ತಂಙಳ್ ಅಲ್ ಬುಖಾರಿಯವರ ಸಭ್ಯಾಧ್ಯಕ್ಷತೆಯಲ್ಲಿ ದರ್ಗಾ ವಠಾರದ ಮದನಿ ಹಾಲಿನಲ್ಲಿ ರವಿವಾರ ಜರುಗಿತು.

ಸಯ್ಯಿದ್ ಮದನಿ ಅರಬಿಕ್ ಟ್ರಸ್ಟ್ ಅಧ್ಯಕ್ಷರಾಗಿ ದರ್ಗಾ ಅಧ್ಯಕ್ಷ ಬಿ.ಜಿ ಹನೀಫ್ ಹಾಜಿ, ಉಪಾಧ್ಯಕ್ಷರಾಗಿ ಸಯ್ಯಿದ್ ಜಲಾಲ್ ತಂಙಳ್ ಅಳೇಕಲ, ಪ್ರಧಾ‌ನ ಕಾರ್ಯದರ್ಶಿಯಾಗಿ ಯು.ಟಿ ತಂಝೀಲ್ ಮುಕ್ಕಚ್ಚೇರಿ, ಜತೆ ಕಾರ್ಯದರ್ಶಿಯಾಗಿ ಯು.ಎ ಹುಸೈನ್ , ಕೋಶಾಧಿಕಾರಿಯಾಗಿ ಆಸೀಫ್ ಸುಂದರಿಬಾಗ್ ಆಯ್ಕೆಯಾದರು.

ಸಯ್ಯಿದ್ ಮದನಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾಗಿ ದರ್ಗಾ ಅಧ್ಯಕ್ಷ ಬಿ.ಜಿ ಹನೀಫ್ ಹಾಜಿ, ಉಪಾಧ್ಯಕ್ಷರಾಗಿ ಯು.ಟಿ. ಖಾದರ್, ಪ್ರಧಾನ ಕಾರ್ಯದರ್ಶಿಯಾಗಿ ಮನ್ಸೂರ್ ಕೈಕೊ, ಜತೆ ಕಾರ್ಯದರ್ಶಿಯಾಗಿ ಇಲ್ಯಾಸ್ ಪೆರ್ಮನ್ನೂರ್, ಕೋಶಾಧಿಕಾರಿಯಾಗಿ ಅಬೂಬಕ್ಕರ್ ಅಲಿ‌ನಗರ ಆಯ್ಕೆಯಾದರು.




 


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News