ಇಂದಿನಿಂದ (ಜೂ.16ರಿಂದ) ಬೆಳ್ತಂಗಡಿಯ ಪ್ರವಾಸಿ ತಾಣಗಳ ಪ್ರವೇಶಕ್ಕೆ ನಿಷೇಧ
Update: 2025-06-16 13:07 IST
ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಬೆಳ್ತಂಗಡಿಯ ಪ್ರವಾಸಿ ತಾಣಗಳಿಗೆ ಪ್ರವೇಶ ನಿಷೇಧಿಸಲಾಗಿದೆ.
ಜಮಲಾಬಾದ್ ಗಡ (ಗಡಾಯಿಕಲ್ಲು), ಬಂಡಾಜೆ, ಬೊಳ್ಳೆ, ದಿಡುಪೆ ಜಲಪಾತ ಪ್ರವಾಸಿ ತಾಣಗಳಿಗೆ ಜೂ.16ರಿಂದ ಮುಂದಿನ ಆದೇಶದವರೆಗೆ ಪ್ರವಾಸಿಗರ ಪ್ರವೇಶಕ್ಕೆ ನಿಷೇಧ ಹೇರಿ ಬೆಳ್ತಂಗಡಿ ವಲಯ ವನ್ಯಜೀವಿ ವಿಭಾಗದ ಅಧಿಕಾರಿಗಳು ಆದೇಶ ಹೊರಡಿಸಿದ್ದಾರೆ.