ಫಲಾನುಭವಿಗಳ ಆಯ್ಕೆ ತ್ವರಿತಗೊಳಿಸಿ: ಅಲ್ಪಸಂಖ್ಯಾತರ ಇಲಾಖೆಗೆ ದ.ಕ. ಜಿಲ್ಲಾಧಿಕಾರಿ ಸೂಚನೆ
ಮಂಗಳೂರು : ಇಲಾಖೆಗೆ ಸಂಬಂಧಪಟ್ಟ ವಿವಿಧಯೋಜನೆ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಯನ್ನು ತ್ವರಿತಗೊಳಿಸಿ ಯೋಜನೆ ಲಾಭವನ್ನು ಸಾರ್ವಜನಿಕರಿಗೆ ಶೀಘ್ರವಾಗಿ ತಲುಪಿಸಲು ಅಲ್ಪಸಂಖ್ಯಾತರ ಇಲಾಖೆಗೆ ಜಿಲ್ಲಾಧಿಕಾರಿ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಎಂ.ಪಿ ಸೂಚಿಸಿದ್ದಾರೆ.
ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ವಿವಿಧ ಯೋಜನೆಗಳಿಗೆ ಅರ್ಜಿ ಸಲ್ಲಿಕೆಯಾದ ನಂತರ ನಿಯಮಾನುಸಾರ ಪರಿಶೀಲಿಸಿ ಫಲಾನುಭವಿಗಳ ಆಯ್ಕೆಯಾದ ಕಡತವನ್ನು ಸಲ್ಲಿಸಬೇಕು. ಫಲಾನುಭವಿಗಳ ಆಯ್ಕೆಪಟ್ಟಿಯೊಂದಿಗೆ ವೈಟಿಂಗ್ ಲಿಸ್ಟ್ ಪಟ್ಟಿಕೂಡ ತಯಾರಿಸಬೇಕು. ಆಯ್ಕೆಯಾದ ಫಲಾನುಭವಿಗಳ ತಾಂತ್ರಿಕ ಕಾರಣಗಳಿಂದ ಅನರ್ಹಗೊಂಡರೆ ವೈಟಿಂಗ್ ಲಿಸ್ಟ್‌ನಲ್ಲಿರುವ ಫಲಾನುಭವಿ ಗಳನ್ನು ಆಯ್ಕೆ ಮಾಡಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.
ವಿದ್ಯಾರ್ಥಿಗಳು ಇಲ್ಲದಿದ್ದರೂ ಕಡಬ ಪಟ್ಟಣದಲ್ಲಿ ಬಾಲಕಿಯರ ಹಾಸ್ಟೆಲ್‌ಹೊಸ ಕಟ್ಟಡ ನಿರ್ಮಿಸಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಜಿಲ್ಲಾಧಿಕಾರಿಗಳು,ಕೂಡಲೇ ವಸತಿ ನಿಲಯಕ್ಕೆ ವಿದ್ಯಾರ್ಥಿಗಳ ಪ್ರವೇಶ ನೀಡಲುಕ್ರಮ ಕೈಗೊಳುವಂತೆ ಸೂಚಿಸಿದರು.
ಅಲ್ಪಸಂಖ್ಯಾತರಅಭಿವೃದ್ಧಿ ನಿಗಮದ ವಿವಿಧಯೋಜನೆ ಫಲಾನುಭವಿಗಳ ಪಟ್ಟಿಯನ್ನು ಕೂಡಲೆ ಸಲ್ಲಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು. ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ ಪ್ರವೇಶಾತಿ ಹೆಚ್ಚಳಕ್ಕೆ ಒತ್ತು ನೀಡಬೇಕು. ಹಾಸ್ಟೆಲ್‌ಗಳಿಗೆ ಸ್ವಂತಕಟ್ಟಡ ನಿರ್ಮಿಸಲು ಗಮನಹರಿಸಬೇಕುಎಂದು ಅವರು ನಿರ್ದೇಶಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಣಾಧಿಕಾರಿ ಡಾ.ಆನಂದ್.ಕೆ, ಅಪರಜಿಲ್ಲಾಧಿಕಾರಿ ಡಾ.ಸಂತೋಷ್, ವಿವಿಧ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.